ಹುಬ್ಬಳ್ಳಿ: ನೃಪತುಂಗ ಬೆಟ್ಟದ ತಪ್ಪಲಿನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನಲೆಯಲ್ಲಿ, ಚಿರತೆ ಸೆರೆ ಹಿಡಿಯುವವರೆಗೆ, ಪಿರಾಮಿಡ್ ಧ್ಯಾನ ಕೇಂದ್ರದ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಸಿದ್ದಾರೆ.
ಚಿರತೆ ಸರೆಹಿಡಿಯುವ ಕಾರ್ಯ ಪ್ರಗತಿಯಲ್ಲಿದೆ. ಚಿರತೆ ಸೆರೆ ಸಿಕ್ಕುವವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಪಿರಾಮಿಡ್ ಧ್ಯಾನಕೇಂದ್ರದ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ, ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡದಂತೆ ಹುಡಾ ಆಯುಕ್ತರು ಹಾಗೂ ಪಿರಾಮಿಡ್ ಧ್ಯಾನ ಕೇಂದ್ರದ ಉಸ್ತುವಾರಿ ಸಮಿತಿಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Kshetra Samachara
21/09/2021 07:00 pm