ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಷ್ಟುದಿನ ಕಳೆದರೂ ಮನೆಗೆ ಬಂದಿಲ್ಲ ನ್ಯಾಚುರಲ್ ಗ್ಯಾಸ್ ಕನೆಕ್ಷನ್: ಏನ್ರಿ ಇದು ದಾರಿ ಕಾದು ಕಾದು ಸಾಕಯ್ತು...!

ಹುಬ್ಬಳ್ಳಿ: ಅದು ಕೇಂದ್ರ ಸರ್ಕಾರದ ಜನಪರ ಯೋಜನೆ, ಪ್ರತಿ ಮನೆ ಮನೆಗೂ ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಾರಿ ಮಾಡಿರುವ ಯೋಜನೆ ನಿರೀಕ್ಷೆ ಮಟ್ಟದಲ್ಲಿ ಪೂರ್ಣಗೊಳ್ಳದೇ ವಿಳಂಬವಾಗ್ತಿದೆ. ವಿಳಂಬವಾಗುತ್ತಿರುವ ಆ ಯೋಜನೆಗೆ ಕಾರಣವಾದರೂ ಏನು ಅಂತಾ ಹೇಳ್ತೀವಿ ನೋಡಿ...

ಹೀಗೆ ಪ್ರತಿ ಮನೆ ಮನೆಗೂ ನ್ಯಾಚುರಲ್ ಗ್ಯಾಸ್ ವ್ಯವಸ್ಥೆ ಅಳವಡಿಸುವ ಮಹತ್ತರ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಐಒಸಿ ಮತ್ತು ಅದಾನಿ ಗ್ಯಾಸ್ ಕಂಪನಿಗೆ ಜಂಟಿಯಾಗಿ ಈ ಯೋಜನೆಯ ಜವಾಬ್ದಾರಿಯನ್ನು ವಹಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ 2016 ರಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಈಗಾಗಲೇ ಪೈಪ್ಡ್ ನ್ಯಾಚುರಲ್ ಗ್ಯಾಸ್ ಅಳವಡಿಕೆ ಕಾರ್ಯ ಮುಂದುವರೆದಿದೆ.ಆದರೆ ನಿರೀಕ್ಷಿತ ಮಟ್ಟದಲ್ಲಿ ಈ ಯೋಜನೆ ಪೂರ್ಣಗೊಂಡಿಲ್ಲ. ಅಧಿಕಾರಿಗಳಲ್ಲಿ ಹಾಗೂ ಜನಪ್ರತಿನಿಧಿಗಳಲ್ಲಿ ಮೂಡುತ್ತಿರುವ ನಿರಾಸಕ್ತಿ ಹಾಗೂ ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತಂತೆ ತಿಳಿವಳಿಕೆ ಹಾಗೂ ಜಾಗೃತಿ ಕೊರತೆಯೇ ಈ ಸಮಸ್ಯೆಗೆ ಕಾರಣವಾ ಅನ್ನೋ ಅನುಮಾನ ಹುಟ್ಟುಹಾಕಿದೆ.

ಇನ್ನೂ ಪ್ರಮುಖವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ನವನಗರ, ಬೈರಿದೇವರಕೊಪ್ಪ, ಸೇರಿದಂತೆ 18 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದೆ. ಈ ಹಿನ್ನೆಲೆಯಲ್ಲಿ 2020 ಹಾಗೂ 2021 ರ ಮೇ ವರೆಗೆ ಸುಮಾರು 19 ಸಾವಿರ ಮನೆಗಳಿಗೆ ಪೈಪ್ಡ್ ನ್ಯಾಚುರಲ್ ಗ್ಯಾಸ್ ಅಳವಡಿಕೆಯ ಗುರಿಯನ್ನು ಈ ಕಂಪನಿಗಳು ಹೊಂದಿದ್ದವು. ಆದರೆ ಕೋವಿಡ್ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲವಾದ ಹಿನ್ನೆಲೆ ಇದೀಗ ಕೇವಲ 11 ಸಾವಿರ ಮನೆಗಳಿಗೆ ಪೈಪ್ ಲೈನ್ ಅಳವಡಿಸಲಾಗಿದೆ. ಹೀಗಾಗಿ ಇನ್ನೂ ಬಾಕಿ ಇರೋ ಮನೆಗಳಿಗೆ ಪೈಪ್ ಲೈನ್ ಅಳವಡಿಸೋಕೆ ಡಿಸೆಂಬರ್ ವರೆಗೂ ಕಾಲಾವಕಾಶ ಕೇಳಿದ್ದು, ಅಲ್ದೆ 2022 - 23 ರವರೆಗೆ 21 ಸಾವಿರಕ್ಕೂ ಅಧಿಕ ಮನೆಗಳಿಗೆ ಪೈಪ್ ಲೈನ್ ಅಳವಡಿಸೋ ಗುರಿ ಹೊಂದಲಾಗಿದೆ. ಆದರೆ ಈ ಯೋಜನೆಯ ಕುರಿತು ಜನರಲ್ಲಿ ಜಾಗೃತಿ ಮೂಡಿದ್ರೆ ಮಾತ್ರ ಯೋಜನೆಯ ಉಪಯೋಗ ಸಾರ್ವಜನಿಕರಿಗೆ ದೊರೆಯಲಿದೆ.

Edited By : Nagesh Gaonkar
Kshetra Samachara

Kshetra Samachara

01/10/2021 05:54 pm

Cinque Terre

24.72 K

Cinque Terre

5

ಸಂಬಂಧಿತ ಸುದ್ದಿ