ಹುಬ್ಬಳ್ಳಿ: ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಜನಜನಿತವಾಗಿರುವ ನೈಋತ್ಯ ರೈಲ್ವೆ ವಲಯ ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಭಾರತ ಕಾರ್ಯಕ್ಕೆ ಆದ್ಯತೆ ನೀಡುವ ಮೂಲಕ ನಮ್ಮ ರೈಲ್ವೆ ನಮ್ಮ ಆರೋಗ್ಯ ಎಂಬುವಂತ ಪರಿಕಲ್ಪನೆಗೆ ಮುಂದಾಗಿದೆ.
ನೈಋತ್ಯ ರೈಲ್ವೆ ವಲಯವು ಸುಮಾರು ಹದಿನೈದು ದಿನಗಳ ಕಾಲ ಸ್ವಚ್ಛತೆ ಆದ್ಯತೆ ನೀಡುವ ಮೂಲಕ ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಆವರಣಗಳು ಹಾಗೂ ಸಾರ್ವಜನಿಕ ಉದ್ಯಾನವನದ ಸ್ವಚ್ಚತೆ ಕೈ ಜೋಡಿಸುವ ಮೂಲಕ ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಿದೆ.
ಇನ್ನೂ ವ್ಯವಸ್ಥಾಪಕ ನಿರ್ದೇಶಕ ಸಂಜೀವ ಕಿಶೋರ್ ನೇತೃತ್ವದಲ್ಲಿ ಇಂತಹದೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು, ರೈಲ್ವೆ ಸಿಬ್ಬಂದಿ ಕೂಡ ಕೈ ಜೋಡಿಸಿ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಸ್ವಚ್ಚತಾ ದಿನವಾಗಿ ಆಚರಿಸುವ ಮೂಲಕ ಸ್ವಚ್ಛ ಭಾರತ ಪರಿಕಲ್ಪನೆಗೆ ಚಾಲನೆ ನೀಡಲಾಗಿದೆ. ಈಗಾಗಲೇ ನೈಋತ್ಯ ರೈಲ್ವೆ ವಲಯದ ಬಹುತೇಕ ನಿಲ್ದಾಣ ಹಾಗೂ ಸಾರ್ವಜನಿಕ ಉದ್ಯಾನಗಳನ್ನು ಸ್ವಚ್ಛ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಅಡಿಪಾಯ ಹಾಕಿದೆ.
ಒಟ್ಟಿನಲ್ಲಿ ನೈಋತ್ಯ ರೈಲ್ವೆ ವಲಯ ಒಂದಿಲ್ಲೊಂದು ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದ್ದು, ಮುಂಬರುವ ದಿನ ಹೆಚ್ಚಿನ ಗುಣಮಟ್ಟದ ಸೇವೆಯನ್ನು ನೀಡಲಿ ಎಂಬುವುದು ನಮ್ಮ ಆಶಯ...
ಮಲ್ಲೇಶ ಸೂರಣಗಿ,ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
04/10/2021 02:25 pm