ಮಲ್ಲೇಶ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ: ಜನರಿಗೆ ಉತ್ತಮ ಸಾರಿಗೆ ಸೇವೆ ನೀಡುತ್ತಾ ಬಂದಿರುವ ಭಾರತೀಯ ರೈಲ್ವೆಯ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ಈಗ ರೈತ ಸ್ನೇಹಿ ಹಾಗೂ ಗ್ರಾಹಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಮುಂದಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸರಕು ಸಾಗಾಣಿಕೆಗೆ ಆದ್ಯತೆ ನೀಡಿದ್ದ ನೈಋತ್ಯ ರೈಲ್ವೆ ಈಗ ಮತ್ತೊಂದು ಚಿಂತನೆ ನಡೆಸಿದೆ.
ಇಷ್ಟುದಿನ ಸಾರ್ವಜನಿಕ ಪ್ರಯಾಣಕ್ಕೆ ಹಾಗೂ ಪ್ರಯಾಣಿಕರಿಗೆ ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ತಲುಪಿಸಲು ಶ್ರಮಿಸುತ್ತಿದ್ದ ರೈಲ್ವೆ ಇಲಾಖೆ ಈಗ ಗ್ರಾಹಕರ ಸರಕುಗಳನ್ನು ವ್ಯವಸ್ಥಿತವಾಗಿ ತಲುಪಿಸಲು ಹಾಗೂ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಲುಪಿಸುವ ಸದುದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದೆ. ಅಲ್ಲದೇ ಕಿಸಾನ್ ರೈಲ್ವೆ ಓಡಿಸುವ ಮೂಲಕ ರೈತರ ಹಾಗೂ ಗ್ರಾಹಕರ ಕೈಗೆಟುಕುವ ದರದಲ್ಲಿ ಸೇವೆಯನ್ನು ಒದಗಿಲಸು ಮುಂದಾಗಿದೆ.
ಈಗಾಗಲೇ ಬೆಂಗಳೂರು ಹಾಗೂ ಕೋಲಾರ್ ವಲಯದಲ್ಲಿ ಸುಮಾರು 10 ಕಿಸಾನ್ ರೈಲು ಓಡಿಸುವ ಮೂಲಕ ಈಗಾಗಲೇ ಚಾಲನೆ ನೀಡಲಾಗಿದ್ದು, ಈಗ ಉತ್ತರ ಕರ್ನಾಟಕ ಭಾಗದ ರೈತರಿಗೆ ತಮ್ಮ ಬೆಳೆಗೆ ಸೂಕ್ತ ಬೆಲೆಯನ್ನು ನೀಡುವ ಮಾರುಕಟ್ಟೆಗೆ ಕೊಂಡೊಯ್ಯುವ ಸೇತುವೆಯಂತೆ ಈ ನೈಋತ್ಯ ರೈಲ್ವೆ ಕೆಲಸ ಮಾಡಲು ಸಿದ್ಧವಾಗಿದೆ. ಇದರಿಂದ ಈ ಭಾಗದ ರೈತರಿಗೆ ಮಾತ್ರವಲ್ಲದೆ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥ , ಉದ್ಯಮಿಗಳಿಗೆ ಅನುಕೂಲವಾಗಲಿದೆ.
ಒಟ್ಟಿನಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಆಗಿದ್ದೆ ತಡ ಸಾಕಷ್ಟು ಯೋಜನೆಯನ್ನು ನೈಋತ್ಯ ರೈಲ್ವೆ ಜಾರಿಗೊಳಿಸಿದ್ದು,ಇನ್ನೂ ಹೆಚ್ಚು ಹೆಚ್ಚು ಸೇವೆ ಈ ಭಾಗದ ಜನರಿಗೆ ದೊರೆಯಲಿ ಎಂಬುವುದು ನಮ್ಮ ಆಶಯ..
Kshetra Samachara
16/10/2021 03:42 pm