ಧಾರವಾಡ: ಇತ್ತೀಚೆಗೆ ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪಾಟೀಲ ಅವರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ರಾಮ್‌ಸೇನೆ ಕಾರ್ಯಕರ್ತರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.
ಪರೀಕ್ಷೆ ಮುಗಿಸಿ ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯರು ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಅದನ್ನು ಮೊಬೈಲ್‌ನಲ್ಲಿ ಕಾಲೇಜಿನ ಉಪನ್ಯಾಸಕರೊಬ್ಬರು ಚಿತ್ರೀಕರಿಸುತ್ತಿದ್ದರು. ಆಗ ಪ್ರಾಚಾರ್ಯ ಪಾಟೀಲ ಅವರು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅದು ಕೂಡ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದ್ದು, ಪ್ರಾಚಾರ್ಯರನ್ನು ಅಮಾನತ್ತುಗೊಳಿಸುವಂತೆ ಪ್ರತಿಭಟನೆ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಪ್ರಾಚಾರ್ಯರನ್ನು ಅಮಾನತ್ತು ಮಾಡಬೇಕು ಎಂದು ರಾಮ್‌ಸೇನೆ ಕಾರ್ಯಕರ್ತರು ಈ ವೇಳೆ ಒತ್ತಾಯಿಸಿದರು.
Kshetra Samachara
21/10/2021 01:25 pm