ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಮಾನವ ಸರಪಳಿ ನಿರ್ಮಿಸಿ ಹೆಚ್ಚಿನ ಬಸ್ ಸೌಲಭ್ಯ ಕೇಳಿದ ಗ್ರಾಮಸ್ಥರು

ಕುಂದಗೋಳ : ತಮ್ಮೂರಿಗೆ ಸಮರ್ಪಕ ಸಾರಿಗೆ ಬಸ್ ಸೇವೆ ಒದಗಿಸುವಂತೆ ಕಮಡೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕುಂದಗೋಳ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ತಮ್ಮೂರಿಗೆ ಹೆಚ್ಚಿನ ಬಸ್ ಸೌಲಭ್ಯ ನೀಡುವಂತೆ ಸಾರಿಗೆ ನಿರ್ವಾಹಕರಿಗೆ ಮನವಿ ಸಲ್ಲಿಸಿದರು.

ನಿತ್ಯ ಬೆಳಿಗ್ಗೆ ಕುಂದಗೋಳ ಹಾಗೂ ಹುಬ್ಬಳ್ಳಿಗೆ ಕಮಡೊಳ್ಳಿ ಗ್ರಾಮದಿಂದ ಸಂಚರಿಸುವ ನಾಗರೀಕರು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಶೀಘ್ರವೇ ಅಧಿಕಾರಿಗಳು ಕ್ರಮ ಕೈಗೊಂಡು ಕಮಡೊಳ್ಳಿ ಗ್ರಾಮಕ್ಕೆ ಹೆಚ್ಚಿನ ಬಸ್ ಸೌಲಭ್ಯ ಒದಗಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

25/10/2021 04:25 pm

Cinque Terre

14.06 K

Cinque Terre

0

ಸಂಬಂಧಿತ ಸುದ್ದಿ