ಕಲಘಟಗಿ: ತಾಲೂಕಿನ ದ್ಯಾವನಕೊಂಡ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟ ಮಾಡುವುದನ್ನು ತಡೆಗಟ್ಟುವಂತೆ ದುರ್ಗ ದೇವಿ ಸಂಘದ ಮಹಿಳೆಯರು ತಹಶೀಲ್ದಾರ ಹಾಗೂ ಅಬಕಾರಿ ಇಲಾಖೆಯ ನಿರೀಕ್ಷಕರಿಗೆ ಮನವಿ ನೀಡಿ ಒತ್ತಾಯಿಸಿದರು.
ಗ್ರಾಮದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಎಗ್ಗಿಲ್ಲದೇ ನಡೆದಿದೆ.ಇದರಿಂದ ಕೂಲಿ ಕೆಲಸ ಮಾಡಿ ಬರುವವರು ಸಾರಾಯಿ ದಾಸರುತ್ತಿದ್ದಾರೆ.ಇದರಿಂದ ಗ್ರಾಮದ ವಾತಾವರಣ ಹಾಳಾಗಿದೆ.ಮಕ್ಕಳು ಸಹ ಸಾರಾಯಿ ಕುಡಿತದ ಚಟಕ್ಕೆ ಒಳಗಾಗುತ್ತಿದ್ದಾರೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕಾರಣ ಅಕ್ರಮ ಸಾರಾಯಿ ತಡೆಗಟ್ಟುವಂತೆ ಒತ್ತಾಯಿಸಿದರು.ಇಲ್ಲದೇ ಇದ್ದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಮನವಿ ಸ್ವೀಕರಿಸಿ ಪೊಲೀಸ್ ಹಾಗೂ ಅಬಕಾರಿ ಇಲಾಖೆಗೆ ಪತ್ರ ಬರೆದು ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವುದಾಗಿ ತಿಳಿಸಿದರು.ಅಬಕಾರಿ ನಿರೀಕ್ಷಕ ಅಮಿತ್ ಬೆಳ್ಳುಬ್ಬಿಗೆ ಮನವಿ ನೀಡಲಾಯಿತು.
ದುರ್ಗಾದೇವಿ ಸಂಘದ ಪದಾಧಿಕಾರಿಗಳು ಹಾಗೂ ಕರ್ನಾಟಕ ಸಂಗ್ರಾಮ ಸೇನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
26/10/2021 12:05 pm