ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಲ್ಲಾಪೂರ ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಭೇಷ್ ಎಂದ ಅಧಿಕಾರಿಗಳ ತಂಡ

ಕುಂದಗೋಳ : ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹೊಸ ಹೊಸ ಅಭಿವೃದ್ಧಿ ಮೂಲಕ ಗಮನ ಸೆಳೆಯುತ್ತಿರುವ ಅಲ್ಲಾಪೂರ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕಂಡು ಖುಷಿ ಪಟ್ಟಿದೆ.

ಹೌದು ! ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರ, ಸಹಾಯಕ ನಿರ್ದೇಶಕ ಅಜಯ್ ಸೇರಿ ಇತರ ಅಧಿಕಾರಿಗಳ ತಂಡ ಭೇಟಿ ಗ್ರಾಮದಲ್ಲಿ ಕೈಗೊಳ್ಳಲಾದ ಜಾನುವಾರು ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ಎರೆ ಹುಳು ತೊಟ್ಟಿ, ಅಂಗನವಾಡಿ ಅಭಿವೃದ್ಧಿ, ನರೇಗಾ ಕಾಮಗಾರಿ ಕೆಲಸ, ಶುದ್ಧ ಕುಡಿಯುವ ನೀರಿನ ಘಟಕದ ವ್ಯವಸ್ಥೆ, ಶಾಲಾ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿ, ರಸ್ತೆ ನಿರ್ಮಾಣ ಕಾಮಗಾರಿ ನೋಡಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಬೇಷ್ ಎಂದು ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಕೊಂಡಾಡಿ ಇತರರಿಗೆ ನೀವೂ ಮಾರ್ಗದರ್ಶಿ ಎಂದರು.

ಇನ್ನೂ ಮುಖ್ಯವಾಗಿ ಸ್ವಂತ ಖರ್ಚಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಬಿಡಿಸಿದ ಊರಿನ ನೈಜ ಚಿತ್ರಣ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಚಿತ್ರಗಳು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳ ಮನಗೆದ್ದವು.

Edited By : Nirmala Aralikatti
Kshetra Samachara

Kshetra Samachara

12/11/2021 01:16 pm

Cinque Terre

12.75 K

Cinque Terre

1

ಸಂಬಂಧಿತ ಸುದ್ದಿ