ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೊಸ ಬಸ್ ನಿಲ್ದಾಣಕ್ಕೆ ಸ್ವಾಗತಿಸುತ್ತಿವೆ ಅವ್ಯವಸ್ಥೆ ಪರಿಸರ: ಸ್ವಚ್ಚತೆಯೇ ಮರಿಚಿಕೆ...!

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಖ್ಯಾತಿಯ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣವು ಸ್ವಚ್ಛತೆ ಕಾಣದೇ ಗಬ್ಬೆದ್ದು ನಾರುತ್ತಿದೆ. ಈ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಬರುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಶೌಚಾಲಯಗಳ ವ್ಯವಸ್ಥೆ ಇದ್ದರೂ ಕೂಡ ಇಲ್ಲಿ ಬಯಲು ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿವೆ.

ಬೆಂಗಳೂರಿಗೆ ತೆರಳುವ ಬಸ್ ಪ್ಲಾಟ್ ಫಾರ್ಮ್ ಬಳಿಯ ಬಯಲು ಪ್ರದೇಶದಲ್ಲಿ ಕಸದ ರಾಶಿ ಇದ್ದು, ಮಳೆಗಾಲದ ಸಂದರ್ಭದಲ್ಲಿ ದುರ್ವಾಸನೆ ಬೀರುತ್ತದೆ. ಇದರಿಂದ ಇಲ್ಲಿಗೆ ಬರುವ ಪ್ರಯಾಣಿಕರು ಬೇಸತ್ತು ಹೋಗಿದ್ದಾರೆ.

ಇನ್ನೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ. ಅಲ್ಲದೇ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ.

Edited By : Shivu K
Kshetra Samachara

Kshetra Samachara

25/11/2021 01:10 pm

Cinque Terre

16.1 K

Cinque Terre

2

ಸಂಬಂಧಿತ ಸುದ್ದಿ