ಅಣ್ಣಿಗೇರಿ: ತಾಲೂಕಿನ ಬಸಾಪುರ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಬಾರದ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆ ಮತ್ತೆ ಗ್ರಾಮಸ್ಥರು ವಿದ್ಯಾರ್ಥಿಗಳ ಸಮೇತ ರಸ್ತೆಗಿಳಿದು ಪ್ರತಿಭಟನೆ ಮಾಡಿದರು.
ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಘಟಕ ವ್ಯವಸ್ಥಾಪಕರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಗ್ರಾಮಸ್ಥರ ದೂರಿದ್ದಾರೆ. ಕಳೆದ ವಾರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಹಮ್ಮಿಕೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳ ಕಡೆ ಗಮನ ಹರಿಸದೇ ಕಾಲಹರಣ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಬಸಾಪುರ ಗ್ರಾಮದಿಂದ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಣ್ಣಿಗೇರಿ, ನವಲಗುಂದ, ಗದಗ ಹಾಗೂ ಹುಬ್ಬಳ್ಳಿಗೆ ಹೋಗುತ್ತಾರೆ. ಈ ವಿದ್ಯಾರ್ಥಿಗಳಿಗೆ ಹೋಗಿ ಬರಲು ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ರಸ್ತೆಗಿಳಿಯುವ ಪರಿಸ್ಥಿತಿ ಒದಗಿ ಬಂದಂತಾಗಿದೆ. ಇನ್ನು ಮುಂದಾದರು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡುತ್ತಾರೊ.. ಲ್ಲವೋ ಎಂದು ಕಾದು ನೋಡೋಣ.
Kshetra Samachara
26/11/2021 01:22 pm