ಕುಂದಗೋಳ: ತಾಲೂಕಿನ ಅಲ್ಲಾಪೂರ ಗ್ರಾಮಕ್ಕೆ ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ.ಎಚ್.ಎಚ್.ಕುಕನೂರ ಭೇಟಿ ನೀಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡ ಬಗೆಯನ್ನು ಪರಿಶೀಲನೆ ನಡೆಸಿದರು.
ಬಳಿಕ ಅಂಗನವಾಡಿ ಕಟ್ಟಡಕ್ಕೆ ಭೇಟಿ ಕೊಟ್ಟ ಅವರು ಅಲ್ಲಿನ ಕಡತ ಹಾಗೂ ಮಕ್ಕಳಿಗೆ ಆಹಾರ ಸರಬರಾಜು ವಿವಿರ ಮಕ್ಕಳ ಶಾರೀರಿಕ ಬೆಳವಣಿಗೆ ದಾಖಲೆ ಪರಿಶೀಲನೆ ನಡೆಸಿ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ರಡ್ಡೇರ್ ಕೈಗೊಳ್ಳುವ ಹೊಸ ಹೊಸ ಅಭಿವೃದ್ಧಿ ಕಾರ್ಯಕ್ಕೆ ಬೇಷ್ ಎಂದರು.
ಬಳಿಕ ಅಲ್ಲಾಪೂರ ಗ್ರಾಮ ಸಂಪೂರ್ಣ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿದೆ, ಈ ರೀತಿ ಅಭಿವೃದ್ಧಿ ಕೇಳಿ ಪಡೆಯಿರಿ ನಮ್ಮ ಇಲಾಖೆ ವತಿಯಿಂದ ಅಗತ್ಯ ಸೌಲಭ್ಯ ನೀಡಲು ಸದಾ ಸಿದ್ಧ ಎಂದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.
Kshetra Samachara
01/12/2021 10:34 pm