ಧಾರವಾಡ: ಧಾರವಾಡದ ತೇಜಸ್ವಿನಗರದ ಬ್ರಿಜ್ ಮೇಲಿನ ಹದಗೆಟ್ಟ ರಸ್ತೆ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಎಚ್ಚೆತ್ತುಕೊಂಡ ಜನ ರಸ್ತೆಗಿಳಿದು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ತೇಜಸ್ವಿನಗರದ ಬ್ರಿಜ್ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರ ಸಂಚಾರಕ್ಕೆ ಸಾಕಷ್ಟು ತೊಂದರೆಯನ್ನುಂಟು ಮಾಡುತ್ತಿದೆ. ಕೂಡಲೇ ಸ್ಥಳೀಯ ಶಾಸಕರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ರಸ್ತೆ ಕಾಮಗಾರಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ರಸ್ತೆ ಬಂದ್ ಆಗಿದ್ದರಿಂದ ಕೆಲ ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ನಿವಾಸಿಗಳ ಮನವೊಲಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Kshetra Samachara
05/12/2021 09:28 am