ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ನೋ ಪಾರ್ಕಿಂಗ್ ಫಲಕದ ಮುಂದೆಯೇ ಪಾರ್ಕಿಂಗ್ : ಹೇಳುವವರಿಲ್ಲ,ಕೇಳುವವರಿಲ್ಲ

ನವಲಗುಂದ : ನವಲಗುಂದ ಪಟ್ಟಣದಲ್ಲಿ ವಿಪರೀತ ಪಾರ್ಕಿಂಗ್ ಸಮಸ್ಯೆ ಇರುವುದು ಎಲ್ಲರಿಗೂ ತಿಳಿದಿರುವ ಸತ್ಯ. ಇದರ ಮಧ್ಯೆ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಆರಂಭಿಸಲಾಗಿದೆ.

ಆದ್ರೆ ನಮ್ಮ ಜನ ಮಾತ್ರ ಪಾರ್ಕಿಂಗ್ ಗಾಗಿ ಕಾಯ್ದಿರಿಸಿದ ಜಾಗವನ್ನು ಬಿಟ್ಟು ನೋ ಪಾರ್ಕಿಂಗ್ ಎಂಬ ಸೂಚನಾ ಫಲಕದ ಮುಂದೆಯೇ ವಾಹನ ನಿಲ್ಲಿಸುವ ಪ್ರವೃತ್ತಿ ಮುಂದುವರೆಸಿದ್ದಾರೆ.

ಇದರಿಂದಾಗಿ ಬಸ್ ಸ್ಟ್ಯಾಂಡ್ ನಲ್ಲಿ ಬಸ್ ಸಂಚಾರಕ್ಕೆ ಸಂಚಕಾರ ಶುರುವಾಗಿದೆ. ಇನ್ನು ಬಸ್ ಸ್ಟ್ಯಾಂಡ್ ನಲ್ಲಿ ದ್ವಿಚಕ್ರ ವಾಹನಗಳಷ್ಟೇ ಅಲ್ಲದೆ ಕಾರುಗಳನ್ನು ಪಾರ್ಕ್ ಮಾಡುತ್ತಿದ್ದಾರೆ.

ಸದ್ಯ ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ನಿಲ್ದಾಣದ ಅಧಿಕಾರಿಗಳು ಎಚ್ಚೆತ್ತು, ಪಾರ್ಕಿಂಗ್ ಸ್ಥಳದಲ್ಲಿಯೇ ವಾಹನಗಳ ನಿಲುಗಡೆ ಮಾಡಲು ಮುಂದಾಗಬೇಕು ಅದಕ್ಕಾಗಿ ಸಿಬ್ಬಂದಿಗಳನ್ನು ನೇಮಿಸಿ, ಸೂಕ್ತ ನಿರ್ವಹಣೆ ಮಾಡಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.

ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ...

Edited By : Shivu K
Kshetra Samachara

Kshetra Samachara

08/12/2021 03:10 pm

Cinque Terre

20.93 K

Cinque Terre

0

ಸಂಬಂಧಿತ ಸುದ್ದಿ