ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ.13ರ ರಾತ್ರಿಯಿಂದ ಡಿ.14 ರ ರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧ

ಧಾರವಾಡ: ವಿಧಾನ ಪರಿಷತ್ ಚುನಾವಣೆ ಇಂದು ಶಾಂತಿಯುತವಾಗಿ ನಡೆದಿದ್ದು, ಮತ ಎಣಿಕೆ ಡಿ.14 ರಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 13 ರ ಮಧ್ಯರಾತ್ರಿ 11:59 ಗಂಟೆಯಿಂದ ಡಿಸೆಂಬರ್ 14 ಮಧ್ಯರಾತ್ರಿ 11:59 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯದ ಅಂಗಡಿ, ಬಾರ್‌ಗಳನ್ನು ಬಂದ್ ಮಾಡಬೇಕು. ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯ ಸಾಗಾಣೆ, ಸಂಗ್ರಹಣೆ ನಿಷೇಧಿಸಿ ಹಾಗೂ ಮದ್ಯಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಉಪ ಅಧೀಕ್ಷಕರು ಹಾಗೂ ವಿಚಕ್ಷಕದಳದ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/12/2021 06:45 pm

Cinque Terre

12.22 K

Cinque Terre

0

ಸಂಬಂಧಿತ ಸುದ್ದಿ