ನವಲಗುಂದ : ಚರಂಡಿಯಲ್ಲಿ ಕೊಳಚೆ ಶೇಖರಣೆ; ಸ್ಥಳೀಯರ ಪರದಾಟ ಎಂಬ ಶೀರ್ಷಿಕೆ ಅಡಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ನೆನ್ನೆ ಸುದ್ದಿಯೊಂದನ್ನು ಬಿತ್ತರಿಸಿತ್ತು. ಈ ಸಮಸ್ಯೆಯಿಂದ ಸಾರ್ವಜನಿಕರಿಗೆ ಮತ್ತು ಸ್ಥಳೀಯರಿಗೆ ಸಾಕಷ್ಟು ತೊಂದರೆ ಉಂಟಾಗಿತ್ತು. ಕೇವಲ 24 ಗಂಟೆಗಳಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಿಂದ ಮುಕ್ತಿ ಸಿಕ್ಕಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ.
ಹೌದು ನವಲಗುಂದ ಪಟ್ಟಣದ ಬ್ಯಾಂಕ್ ಆಫ್ ಬರೋಡ ಎದುರಿನ ಚರಂಡಿಯ ದುಸ್ಥಿತಿಯ ಸುದ್ದಿಯನ್ನು ಬುಧವಾರದಂದು ಪ್ರಕಟಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ನವಲಗುಂದ ಪುರಸಭೆ ಅಧಿಕಾರಿಗಳು ಇಂದು ಮುಂಜಾನೆ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿದ್ದರು. ಅಷ್ಟೇ ಅಲ್ಲದೇ ಕಲ್ಯಾಣ ಮಂಟಪದ ಆಡಳಿತ ಮಂಡಳಿಗೂ ಮುಸುರೆ ನೀರು ಹೊರ ಬಿಡದಂತೆ ಮತ್ತು ಪ್ಲಾಸ್ಟಿಕ್ ಬಳಸದಂತೆ ನೋಟಿಸ್ ಸಹ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಒಟ್ಟಾರೆ ಈಗ ಇಲ್ಲಿನ ಸ್ಥಳೀಯರಿಗೆ ಸಮಸ್ಯೆಯಿಂದ ಮುಕ್ತಿ ಸಿಕ್ಕಿದೆ. ಈ ಸಮಸ್ಯೆ ಮತ್ತೆ ಪುನರಾವರ್ತಿಸದಂತೆ ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡಬೇಕು ಎಂಬುದು ನಿಮ್ಮ ಪಬ್ಲಿಕ್ ನೆಕ್ಸ್ಟ್ ನ ಆಶಯ, ಅಷ್ಟೇ ಅಲ್ಲದೇ ಸಾರ್ವಜನಿಕರ ಆಶಯ ಕೂಡ ಆಗಿದೆ.
ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ
Kshetra Samachara
16/12/2021 04:03 pm