ಕುಂದಗೋಳ : ಕಿತ್ತೂರ ರಾಣಿ ಚೆನ್ನಮ್ಮನ ಬಲಗೈ ಬಂಟ ಸ್ವಾತಂತ್ರ್ಯ ಹೋರಾಟಗಾರ ಸಂಗೋಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಳಿಸಿದ ಇಎಂಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ನಿಲುವನ್ನು ಖಂಡಿಸಿ ಕಿತ್ತೂರು ರಾಣಿ ಚನ್ನಮ್ಮ ಸ್ವಯಂ ಸೇವಾ ಸಂಸ್ಥೆ ಕಾರ್ಯಕರ್ತರು ಧರಣಿ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹೌದು ! ಬೆಳಗಾವಿ ವಿಚಾರದಲ್ಲಿ ನಡೆಯುತ್ತಿರುವ ಗಲಭೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಸಂಗೋಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಳಿಸಿದ ವಿಚಾರವಾಗಿ ಸರ್ಕಾರ ಮೌನ ತಾಳಿರುವುದು ಸರಿಯಲ್ಲ ಇಎಂಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ತಕ್ಕ ಶಾಸ್ತಿ ಮಾಡುವಂತೆ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅಭಿನವ ಕಲ್ಯಾಣಪುರ ಬಸವಣ್ಣನವರ ನೇತೃತ್ವದಲ್ಲಿ ತಹಶೀಲ್ದಾರ ಮನವಿ ಸಲ್ಲಿಸಿದ ಕಿತ್ತೂರು ರಾಣಿ ಸ್ವಯಂ ಸಂಸ್ಥೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಇಎಂಎಸ್ ಹಾಗೂ ಶಿವಸೇನೆ ಪುಂಡಾಟಿಕೆ ವಿರೋಧಿಸಿದರು.
Kshetra Samachara
24/12/2021 11:22 am