ನವಲಗುಂದ : ನವಲಗುಂದ ಪಟ್ಟಣದಲ್ಲಿ ಹಾದು ಹೋಗುವ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವುದು ಸರ್ವೇಸಾಮಾನ್ಯ. ಆದರೆ ಇಂದು ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಬಂದೊದಗಿತ್ತು. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್ ಕ್ಲಿಯರ್ ಮಾಡಿದ ದೃಶ್ಯಗಳು ಕಂಡುಬಂದವು.
ಹೌದು ರಾಷ್ಟ್ರೀಯ ಹೆದ್ದಾರಿ ಚಿಕ್ಕದಾಗಿದೆ. ಅದರಲ್ಲೂ ಪಟ್ಟಣದಲ್ಲಿ ಜನಜಂಗುಳಿ ಇರುತ್ತೆ, ಇದರಿಂದ ವಾಹನಗಳು ರಸ್ತೆ ಮೇಲೆಯೇ ನಿಲ್ಲಿಸಲಾಗುತ್ತಿದೆ. ಇದರಿಂದ ಪಟ್ಟಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇನ್ನು ಇಲ್ಲಿ ಖಾಯಂ ಆಗಿ ಪೊಲೀಸ್ ಸಿಬ್ಬಂದಿಗಳನ್ನು ಆಯೋಜಿಸಲಾಗಿರುತ್ತೆ, ಆದರೆ ಇಂದು ಪೊಲೀಸ್ ಸಿಬ್ಬಂದಿಗಳು ಇಲ್ಲದ ಕಾರಣ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಮೆರೆದರು.
Kshetra Samachara
29/12/2021 01:24 pm