ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಡಾ.ವಿಷ್ಣು 12ನೇ ಪುಣ್ಯಸ್ಮರಣೆ ನೋಟ್ ಬುಕ್ ವಿತರಣೆ

ಕುಂದಗೋಳ : ಡಾ.ವಿಷ್ಣು ಸೇನಾ ಸಮಿತಿ ಧಾರವಾಡ ಜಿಲ್ಲಾ ಕುಂದಗೋಳ ತಾಲೂಕ ಘಟಕದ ವತಿಯಿಂದ ಸಾಹಸ ಸಿಂಹ ಡಾ.ವಿಷ್ಣುವರ್ಧನರವರ 12ನೇ ಪುಣ್ಯಸ್ಮರಣೆ ಅಂಗವಾಗಿ ದೇವನೂರು ಮತ್ತು ಹಂಚಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಆಚರಿಸಲಾಯಿತು.

ಈ ವೇಳೆ ಶಾಲಾ ಮುಖ್ಯೋಪಾಧ್ಯಾಯ ಎಂ.ಎಫ್.ಬೆಳಗಲಿ ಅವರು ವಿಷ್ಣುವರ್ಧನ್ ಸಿನಿಮಾ ಹಾಗೂ ಸಾಮಾಜಿಕ ಸೇವೆ ಅವರ ಗೌರವ ಹಾಗೂ ಸಂದ ಪ್ರಶಸ್ತಿಗಳ ಕುರಿತು ಮಕ್ಕಳಿಗೆ ತಿಳಿಯುವ ಹಾಗೆ ವಿವರಣೆ ಮಾಡಿದರು. ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ಡಾ.ವಿಷ್ಣುವರ್ಧನ ಅಭಿಮಾನಿಗಳು ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/12/2021 12:13 pm

Cinque Terre

21.54 K

Cinque Terre

0

ಸಂಬಂಧಿತ ಸುದ್ದಿ