ಕುಂದಗೋಳ : ಕ್ಷೇತ್ರದ ಮಕ್ಕಳ ಜ್ಞಾನಾರ್ಜನೆಗಾಗಿ ನನ್ನ ಅಧಿಕಾರವಧಿಯಲ್ಲಿ ಶಾಲೆಗಳಿಗೆ ಮೂಲಭೂತ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡುತ್ತೇನೆ ಹಾಗೂ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಒದಗಿಸುತ್ತೇನೆ ಎಂದು ಶಾಸಕಿ ಕುಸುಮಾವತಿ ಶಿವಳಿ ಹೇಳಿದರು.
ಅವರು ಕುಂದಗೋಳ ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಶಾಲೆಯಲ್ಲಿ 1.33 ಲಕ್ಷ ರೂ, ವೆಚ್ಚದಲ್ಲಿ 10 ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಮಕ್ಕಳಿಗೆ ಸಾಕಷ್ಟು ಸೌಲಭ್ಯ ನೀಡುತ್ತಿದ್ದು, ಸದ್ಬಳಕೆ ಮಾಡಿಕೊಂಡು ಉತ್ತಮ ಪ್ರಜೆಗಳಾಗಬೇಕೆಂದು ಅದರಲ್ಲೂ ವಿಶೇಷವಾಗಿ ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಬದಲಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷ ಪ್ರಕಾಶ ಕೋಕಾಟೆ, ಉಪಾಧ್ಯಕ್ಷ ಹನಮಂತಪ್ಪ ರಣತೂರ, ಮುಖಂಡರಾದ ಅರವಿಂದ ಕಟಗಿ, ಕೆ.ಬಿ.ಕೋರಿ , ಈರಪ್ಪ ನಾಗಣ್ಣವರ, ಗುರು ಚಲವಾದಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತದ್ದರು.
Kshetra Samachara
04/01/2022 01:43 pm