ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಜಲ ಜೀವನ್ ಮಷಿನ್ ಕಾಮಗಾರಿಗೆ ಸದುಪಯೋಗಕ್ಕೆ ಸೂಚನೆ

ಕುಂದಗೋಳ : ತಾಲ್ಲೂಕಿನ 26 ಗ್ರಾಮ ಪಂಚಾಯತಿಗಳ 58 ಗ್ರಾಮಗಳ ಒಳಗೊಂಡಂತೆ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಭೆಯನ್ನು ಡಾ.ಮಹೇಶ ಕುರಿಯವರ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತಿ ಹಾಗೂ ಆಕಾಶ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕುಂದಗೋಳ ಜಂಟಿಯಾಗಿ ತಾಲೂಕು ಪಂಚಾಯತಿ ಸಭಾಭವನದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಗುತ್ತಿಗೆದಾರರಿಗೆ ಹಾಗೂ ಎಲ್ಲಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಜೊತೆಗೆ ಸಭೆಯನ್ನು ಮಾಡಿ ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮತ್ತು ಗ್ರಾಮ ಪಂಚಾಯತಯೊಂದಿಗೆ ಸಮನ್ವಯ ಸಾಧಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ಕೆಲಸ ಕಾರ್ಯಗಳನ್ನು ಮಾಡಲು ಸೂಚಿಸಲಾಯಿತು .

ಗ್ರಾಮಗಳ ವ್ಯಾಪ್ತಿಯಲ್ಲಿ ಇರುವಂತಹ ಎಲ್ಲ ಸರಕಾರಿ ಕಚೇರಿಗಳಿಗೂ ಕಟ್ಟಡಗಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸೂಚಿಸಲಾಯಿತು ಹಾಗೂ ಕಾಮಗಾರಿಗಳು ನಡೆಯುವಂತೆ ಸ್ಥಳಗಳಲ್ಲಿ ಕಾಮಗಾರಿಗಳ ಮಾಹಿತಿಯ ಒಳಗೊಂಡಂಥ ಬೋರ್ಡನ್ನು ಅಳವಡಿಸಲು ಸೂಚಿಸಲಾಯಿತು.

ಪಾರದರ್ಶಕವಾಗಿ ಹಾಗೂ ಗುಣಮಟ್ಟದ ಕಾಮಗಾರಿ ಗಳನ್ನು ಕೈಗೊಳ್ಳಲು ಸೂಚಿಸಲಾಯಿತು. ಗ್ರಾಮಗಳ ವ್ಯಾಪ್ತಿಯಲ್ಲಿ ಇರುವಂತಹ ಎಲ್ಲ ಮನೆಗಳಿಗು ನೀರಿನ ಸಂಪರ್ಕವನ್ನು ಒದಗಿಸಲು ಸೂಚಿಸಲಾಯಿತು.

Edited By : PublicNext Desk
Kshetra Samachara

Kshetra Samachara

07/01/2022 11:48 am

Cinque Terre

7.74 K

Cinque Terre

0

ಸಂಬಂಧಿತ ಸುದ್ದಿ