ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್ ಸಿಟಿ ಅಡಿ ಅಭಿವೃದ್ಧಿ ಪಡಿಸಿದ ಗ್ಲಾಸ್‌ಹೌಸ್ ಹಾಗೂ ತೋಳಕೆರೆ ಲೋಕಾರ್ಪಣೆ:ಮುನೇನಕೊಪ್ಪ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾದ ಇಂದಿರಾ ಗ್ಲಾಸ್ ಹಾಗೂ ತೋಳನಕರೆ ಕಾಮಗಾರಿಗಳು ಪೂರ್ಣಗೊಂಡಿವೆ. ಮಹಾತ್ಮಾ ಗಾಂಧಿ ಉದ್ಯಾನವನದಲ್ಲಿನ ಸಂಗೀತ ಕಾರಂಜಿ, ಮಕ್ಕಳ ರೈಲು, ಪಜಲ್ ಕಾರ್ ಪಾರ್ಕಿಂಗ್ ಅಳವಡಿಕೆ ಕಾರ್ಯ ಸಹ ಪೂರ್ಣಗೊಂಡಿದೆ. ಜನವರಿ ಕೊನೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಇವುಗಳನ್ನು ಲೋಕಾರ್ಪಣೆ ಮಾಡಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವುದಾಗಿ ಕೈಮಗ್ಗ, ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

ಹುಬ್ಬಳ್ಳಿ ನಗರದಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸಿದ ಅವರು, ನಂತರ ಸರ್ಕ್ಯೂಟ್ ಹೌಸ್‌‌ನಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅವಳಿ ನಗರದಲ್ಲಿ 930 ಕೋಟಿ ವೆಚ್ಚದಲ್ಲಿ 59 ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ 8 ಕಾಮಗಾರಿಗಳು ಪೂರ್ಣಗೊಂಡಿವೆ. ನಗರದ ಮೂಲಭೂತ ಸೌಕರ್ಯಗಳು ಹೆಚ್ಚಿಸುವ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ ಅಡಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಹುಬ್ಬಳ್ಳಿಯ ಹಳೆಯ ಬಸ್ ನಿಲ್ದಾಣದಲ್ಲಿ, ಸ್ಮಾರ್ಟ್ ಸಿಟಿ ಯೋಜನಯಡಿ 37 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ, ಜಿ ಪ್ಲಸ್ ಒನ್ ಮಾದರಿಯ ನೂತನ ಬಸ್ ನಿಲ್ದಾಣ ಕಾಮಗಾರಿ, ಈ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಾತ್ರಿ ವೇಳೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಹಾಗೂ ಕಾಲಮಿತಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Edited By : Nirmala Aralikatti
Kshetra Samachara

Kshetra Samachara

10/01/2022 05:27 pm

Cinque Terre

17.71 K

Cinque Terre

1

ಸಂಬಂಧಿತ ಸುದ್ದಿ