ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಲಕಮಾಪುರದಲ್ಲಿ ಗ್ರಾಮಸ್ಥರಿಂದ ರಸ್ತೆ ತಡೆ

ಧಾರವಾಡ: ಧಾರವಾಡ ತಾಲೂಕಿನ ಲಕಮಾಪುರ ಗ್ರಾಮಕ್ಕೆ ಬಸ್ಸಿನ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಲಕಮಾಪುರ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಲಕಮಾಪುರ ಗ್ರಾಮದ ಮೂಲಕ ಧಾರವಾಡಕ್ಕೆ ಹೋಗುವ ಬಸ್ಸುಗಳನ್ನು ತಡೆದು ನಿಲ್ಲಿಸಿದ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಪ್ರತ್ಯೇಕ ಬಸ್ಸಿನ ಸೌಲಭ್ಯ ಒದಗಿಸಬೇಕು ಎಂದು ಪಟ್ಟು ಹಿಡಿದು ರಸ್ತೆಯಲ್ಲೇ ಕೆಲ ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದರಿಂದ ಸಾರಿಗೆ ಸಂಸ್ಥೆ ಬಸ್ಸುಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಬಂದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಲಕಮಾಪುರ ಗ್ರಾಮಕ್ಕೆ ಪ್ರತ್ಯೇಕ ಬಸ್ಸಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ನಂತರವೇ ಗ್ರಾಮಸ್ಥರು ತಮ್ಮ ಪ್ರತಿಭಟನೆ ಕೈಬಿಟ್ಟು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗರಗ ಠಾಣೆ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.

Edited By : Manjunath H D
Kshetra Samachara

Kshetra Samachara

12/01/2022 12:46 pm

Cinque Terre

36.52 K

Cinque Terre

0

ಸಂಬಂಧಿತ ಸುದ್ದಿ