ಹುಬ್ಬಳ್ಳಿ: ಅಂತೂ ಇಂತೂ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಪೊಲೀಸ್ ಇಲಾಖೆ ಎಚ್ಚೇತ್ತುಕೊಂಡು ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದು, ಇದು ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯ ಇಂಪ್ಯಾಕ್ಟ್ ಆಗಿದೆ.
ಹೌದು..ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಹತ್ತಿರದಲ್ಲಿ ಸಾಯಿಬಾಬಾ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಓಡಾಟಕ್ಕೆ ಅಡ್ಡಿ ಉಂಟು ಮಾಡಲಾಗಿತ್ತು. ಈ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ಫುಟ್ ಪಾತ್ ಸಾರ್ವಜನಿಕ ಓಡಾಟಕ್ಕೋ ಅಥವಾ ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಹೊಂದಿಸಿ ಇಡುವುದಕ್ಕೋ ಎಂಬುವಂತ ವರದಿಯನ್ನು ಬಿತ್ತರಿಸಿದ ಬೆನ್ನಲ್ಲೇ ಪೊಲೀಸ್ ಇಲಾಖೆಯು ಎಚ್ಚೇತ್ತುಕೊಂಡು ಬ್ಯಾರಿಕೇಡ್ ತೆರವುಗೊಳಿಸಿದೆ. ಅಲ್ಲದೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಟ್ವಿಟರ್ ಮೂಲಕ ಪಬ್ಲಿಕ್ ನೆಕ್ಸ್ಟ್ ಗಮನಕ್ಕೆ ತಂದಿದ್ದು, ಪಬ್ಲಿಕ್ ನೆಕ್ಸ್ಟ್ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.
ಒಟ್ಟಿನಲ್ಲಿ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಸಾರ್ವಜನಿಕರ ಓಡಾಟಕ್ಕೆ ಅಡ್ಡಿ ಉಂಟು ಮಾಡಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಾರೆ. ನಿನ್ನೆಯಷ್ಟೇ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಗೆ ತಕ್ಷಣವೇ ಸ್ಪಂದಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/01/2022 09:20 pm