ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾತ್ರೋರಾತ್ರಿ ಪ್ರತಿಭಟನೆಗಿಳಿದ ರೈತರು: ಬೇಗನೆ ಹೋಟೆಲ್ ಬಂದ್ ಮಾಡಿಸಿದ್ದಕ್ಕೆ ಉಟಕ್ಕಾಗಿ ಪರದಾಡಿದ ಅನ್ನದಾತನ....!

ಹುಬ್ಬಳ್ಳಿ: ಪೊಲೀಸರು ಬೇಗನೆ ಹೊಟೇಲುಗಳನ್ನು ಬಂದ್ ಮಾಡಿಸಿದ್ದರಿಂದ ಊಟ ಸಿಕ್ಕಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ನೂರಾರು ರೈತರು ಇಲ್ಲಿನ ಎಪಿಎಂಸಿ ಎದುರು ಹು-ಧಾ ಮುಖ್ಯ ರಸ್ತೆ ಹಾಗೂ ಬಿಆರ್ ಟಿಎಸ್ ರಸ್ತೆ ಬಂದ್ ಮಾಡಿ ರಾತ್ರಿ ಪ್ರತಿಭಟಿಸಿದರು.

ಹೌದು.. ಮೆಣಸಿನಕಾಯಿ ಮಾರಾಟಕ್ಕೆ ಧಾರವಾಡ ಸೇರಿದಂತೆ ಗದಗ, ಬಾಗಲಕೋಟೆ ಜಿಲ್ಲೆ ಹಾಗೂ ಬೇರೆ ಬೇರೆ ಊರುಗಳಿಂದ ರೈತರು ಬಂದಿದ್ದರು. ಮೆಣಸಿನಕಾಯಿ ತೂಕ ಆಗಿಲ್ಲ. ಪೊಲೀಸರು ಬೇಗನೇ ಎಲ್ಲ ಹೋಟೆಲ್ ಗಳನ್ನು ಬಂದ್ ಮಾಡಿಸಿದ್ದಾರೆ. ಹೀಗಾಗಿ ಇಲ್ಲಿಯೇ ವಾಸ್ತವ್ಯ ಮಾಡಿರುವ ನಮಗೆ ರಾತ್ರಿ ಊಟ ಸಿಗುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಎಸಿಪಿ ವಿನೋದ ಮುಕ್ತೇದಾರ ಹಾಗೂ ಎಪಿಎಂಸಿ-ನವನಗರ ಠಾಣೆ ಇನ್ಸಪೆಕ್ಟರ್ ಮತ್ತು ಸಿಬ್ಬಂದಿ ತೆರಳಿ, ಪತ್ರಿಭಟನಾನಿರತ ರೈತರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು. ಅವರಿಗೆ ಎಪಿಎಂಸಿ ಯಲ್ಲಿಯೇ ಊಟದ ವ್ಯವಸ್ಥೆ ಮಾಡಿಸಿದರು.

ಗುರುವಾರ ಒಂದೇದಿನ ಇಲ್ಲಿನ ಎಪಿಎಂಸಿಗೆ 42ಸಾವಿರ ಚೀಲ ಮೆಣಸಿನಕಾಯಿ ಆವಕವಾಗಿದೆ. ಬೆಳಗ್ಗೆ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ರೈತರು ಮೆಣಸಿನಕಾಯಿ ತಂದಿದ್ದರಿಂದ ವ್ಯಾಪಾರಸ್ಥರು ಇಳಿಸಿಕೊಳ್ಳಲು ಸ್ಥಳವಿಲ್ಲವೆಂದು ನಿರಾಕರಿಸಿದ್ದರು. ಆಗಲೂ ರೈತರು ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಾಪಾರಸ್ಥರ ಮನವೊಲಿಸಿ ರೈತರು ತಂದಿದ್ದ ಮೆಣಸಿನಕಾಯಿ ಇಳಿಸಿಕೊಳ್ಳುವ ವ್ಯವಸ್ಥೆ ಮಾಡಿಸಿದ್ದರು. ಆದರೆ ರಾತ್ರಿ ನಮಗೆ ಊಟ ಸಿಕ್ಕಿಲ್ಲವೆಂದು ರೈತರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Edited By : Vijay Kumar
Kshetra Samachara

Kshetra Samachara

21/01/2022 09:05 am

Cinque Terre

32.35 K

Cinque Terre

3

ಸಂಬಂಧಿತ ಸುದ್ದಿ