ಹುಬ್ಬಳ್ಳಿ : ಶಾರ್ಟ್ ಸರ್ಕ್ಯೂಟ್ ಆಗಿ ಮೂರ್ನಾಲ್ಕು ದಿನಗಳಿಂದ ನಗರದ ಮಿನಿ ವಿಧಾನ ಸೌಧದಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಪರಿಣಾಮ ಈಗ ಸಾರ್ವಜನಿಕರು ಪರದಾಡುವ ಪ್ರಸಂಗ ಬಂದೊದಗಿದೆ.
ಹೌದು,,,, ಕಳೆದ ಮೂರ್ನಾಲ್ಕು ದಿನಗಳಿಂದ ಮಿನಿವಿಧಾನ ಸೌಧದಲ್ಲಿ ವಿದ್ಯುತ್ ಕಟ್ ಆಗಿದ್ದು, ಈಗ ಎಲ್ಲ ಕೆಲಸಗಳ ಸಂಪೂರ್ಣವಾಗಿ ಬಂದ್ ಆಗಿವೆ. ಇದರಿಂದಾಗಿ ದೂರದ ಊರಿನಿಂದ ಬರುವ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಸೋಮವಾರ ದಿನದಂದು ವಿದ್ಯುತ್ ಸಂಪರ್ಕ ಕಲ್ಪಿಸುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯುತ್ ಸಂಪರ್ಕ ಕಡಿತದ ಬಗ್ಗೆ ನಮಗೆ ಮೊದಲೇ ಮಾಹಿತಿ ನೀಡಿದ್ದರೆ ನಾವು ದೂರದಿಂದ ಇಲ್ಲಿಯ ತನಕ ಬರತಿರಲಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
Kshetra Samachara
21/01/2022 04:40 pm