ಕುಂದಗೋಳ : ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವವನ್ನು ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ನೇತೃತ್ವದಲ್ಲಿ ಅತಿ ಸರಳವಾಗಿ ಆಚರಿಸಲಾಯಿತು.
ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪೂಷ್ಪಾರ್ಪಣೆ ಮಾಡಿ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತ ನೆನೆಪು ಪೌಂಡೇಶನ್ ಸಂಸ್ಥಾಪಕರಾದ ವಿರೇಶ್ ಪ್ರಳಯಕಲ್ಮಠ ಅವರು ಅಂಬಿಗರ ಚೌಡಯ್ಯನವರ ಸಾಮಾಜಿಕ ಲೌಕಿಕ ಆಧ್ಯಾತ್ಮಿಕ ಸಾರವನ್ನು ಸಭಿಕರಿಗೆ ತಿಳಿಸಿದರು.
ನಿಜಶರಣ ಅಂಬಿಗರ ಚೌಡಯ್ಯನವರು ಜಯಂತಿ ಬಳಿಕ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಕುಂದಗೋಳ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗಣರಾಜ್ಯೋತ್ಸವ ಕೋವಿಡ್ ಹಿನ್ನೆಲೆಯಲ್ಲಿ ಯಾವ ರೀತಿ ಆಚರಿಸಬೇಕು ಎಂದು ಯಾವ ಯಾವ ಮಾರ್ಗಸೂಚಿ ಪಾಲಿಸಬೇಕು ಎಂಬುದರ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಕಾರ್ಯ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
Kshetra Samachara
22/01/2022 01:30 pm