ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್
ಹುಬ್ಬಳ್ಳಿ: ಸುಮಾರು ವರ್ಷಗಳಿಂದ ಸಾರ್ವಜನಿಕರು ಮಾತ್ರವಲ್ಲದೇ ವಿದ್ಯಾರ್ಥಿಗಳು ಅನುಭವಿಸುತ್ತಿದ್ದ ಸಮಸ್ಯೆ ಬ್ರೇಕ್ ಬಿದ್ದಿದೆ. ಸೂಕ್ತ ಪರಿಹಾರ ಸಿಗದೇ ನನೆಗುದಿಗೆ ಬಿದ್ದಿದ್ದ ರಸ್ತೆಗೆ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಮುಕ್ತಿ ಸಿಕ್ಕಿದ್ದು, ಇದು ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್ ಇದಾಗಿದೆ.
ವಾಣಿಜ್ಯನಗರಿ ಹುಬ್ಬಳ್ಳಿ ಕುಸುಗಲ್ ರಸ್ತೆಗೆ ಹೊಂದಿಕೊಂಡಿರುವ ಸರಸ್ವತಿಪುರಂ ರಸ್ತೆಯು ಮಳೆ ಬಂದರೆ ಸಾಕು ಕೆಸರಿನ ಹೊಂಡದಂತಾಗುತ್ತಿತ್ತು. ಅಲ್ಲದೇ ಇಲ್ಲಿ ಬೈಕ್ ಸವಾರರು ಹಾಗೂ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿತ್ತು. ಅದೆಷ್ಟೋ ಜನರು ಬಿದ್ದು ಆಸ್ಪತ್ರೆಯಲ್ಲಿ ಆರೈಕೆ ಆಗಿದ್ದುಂಟು ಈ ಹಿನ್ನೆಲೆಯಲ್ಲಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಬಿತ್ತರಿಸುವ ಮೂಲಕ ಪಾಲಿಕೆ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿತ್ತು. ಅಲ್ಲದೇ ಸಮಸ್ಯೆಯನ್ನು ಬೆನ್ನುಬಿಡದೇ ಅಧಿಕಾರಿಗಳಿಗೆ ಮನಮುಟ್ಟುವಂತೆ ಮಾಡಿದ್ದು, ಈಗ ಸಮಸ್ಯೆಗೆ ಬ್ರೇಕ್ ಬಿದ್ದಿದೆ. ಈಗಾಗಲೇ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದ ರಸ್ತೆಯ ಕಾಮಗಾರಿ ಆರಂಭಗೊಂಡಿದ್ದು, ಜನರು ಪಬ್ಲಿಕ್ ನೆಕ್ಸ್ಟ್ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನೂ ಈಗಾಗಲೇ ಸಾಕಷ್ಟು ಸಮಸ್ಯೆ ಅನುಭವಿಸಿದ್ದ ಜನರು ಈಗ ಪಬ್ಲಿಕ್ ನೆಕ್ಸ್ಟ್ ವರದಿಯ ಫಲಶೃತಿಯಿಂದ ನಿಟ್ಟುಸಿರು ಬಿಡುವಂತಾಗಿದ್ದು, ಸುಮಾರು ವರ್ಷದ ಸಮಸ್ಯೆಗೆ ಈಗ ಬ್ರೇಕ್ ಬಿದ್ದಿದ್ದು, ಪಬ್ಲಿಕ್ ನೆಕ್ಸ್ಟ್ ವರದಿಗೆ ಸ್ಪಂದಿಸಿರುವ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕಾರ್ಯ ಮತ್ತಷ್ಟು ಜನಪರವಾಗಿರಲಿ ಎಂಬುವುದು ಪಬ್ಲಿಕ್ ನೆಕ್ಸ್ಟ್ ಆಶಯ...
ಮಲ್ಲೇಶ ಸೂರಣಗಿ,
ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
01/02/2022 01:32 pm