ಅಣ್ಣಿಗೇರಿ : ಗಣರಾಜ್ಯೋತ್ಸವ ದಿನದಂದು ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಖಂಡಿಸಿ, ವಿವಿಧ ದಲಿತ ಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಅಣ್ಣಿಗೇರಿ ಬಂದ್ ಗೆ ಕರೆ ನೀಡಿದ್ದಾರೆ.
ಪಟ್ಟಣದಲ್ಲಿ 10 ಗಂಟೆಯಿಂದ 2:00 ರ ವರಗೆ ಪ್ರತಿಭಟನೆಯನ್ನು ಮಾಡಿ, ಬಂದ್ ಮಾಡುವುದಾಗಿ ಯೋಗೀಶ ಚಲವಾದಿ ಅವರು ಶುಕ್ರವಾರ ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ತಿಳಿಸಿದ್ದಾರೆ.
Kshetra Samachara
05/02/2022 09:13 am