ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 2 ವರ್ಷ ಕಳೆದ್ರೂ ಕಾಮಗಾರಿಗಿಲ್ಲ ಗ್ರೀನ್ ಸಿಗ್ನಲ್- ಭೂಸ್ವಾಧೀನವೇ ದೊಡ್ಡ ಸವಾಲು

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ಸಾಕಷ್ಟು ಕಾಮಗಾರಿ ಚುರುಕುಗೊಳಿಸಿದರೂ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಇನ್ನೂ ಚಾಲನೆ ಸಿಕ್ಕಿಲ್ಲ. ಕಿತ್ತೂರು ಮಾರ್ಗವಾಗಿ ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣದ ಕನಸನ್ನು ಜನರು ಕಾಣುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಯೋಜನೆ ಘೋಷಣೆ ಆಗಿದ್ದರೂ, ಇನ್ನೂ ಕಾಮಗಾರಿ ಆರಂಭವಾಗಿಲ್ಲ.

ಹೌದು. 2021–2022ರ ಕೇಂದ್ರ ರೈಲ್ವೆ ಬಜೆಟ್‌ನಲ್ಲಿ ಈ ಯೋಜನೆಗೆ 50 ಕೋಟಿ ರೂ. ಮೀಸಲಾಗಿಡಲಾಗಿತ್ತು. ಆದರೆ ರೈಲು ಮಾರ್ಗ ನಿರ್ಮಾಣಕ್ಕೆ ಬೇಕಾದ ಭೂಮಿ ನೀಡದ್ದರಿಂದಾಗಿ ಅನುದಾನ ಖರ್ಚಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಕೇವಲ 20 ಕೋಟಿ ರೂ. ನೀಡಲಾಗಿದೆ. ಮಾರ್ಗ ನಿರ್ಮಾಣಕ್ಕೆ ಬೇಕಾದ ಭೂಮಿಯನ್ನು ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದರೆ, ಕಾಮಗಾರಿ ಆರಂಭಿಸಲು ರೈಲ್ವೆ ಇಲಾಖೆ ಸಜ್ಜಾಗಿದೆ.

ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗಿ ರೈಲ್ವೆ ಮಾರ್ಗಗಳಿಗೆ ಬೇಕಾಗುವ ಭೂಮಿಯನ್ನು ಒದಗಿಸುವ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಂಡಿದೆ. ಧಾರವಾಡ–ಬೆಳಗಾವಿ ಮಾರ್ಗಕ್ಕೆ ಒಟ್ಟು 827 ಎಕರೆ ಭೂಮಿ ಅಗತ್ಯವಿದ್ದು, ಧಾರವಾಡ ಜಿಲ್ಲೆಯಲ್ಲಿ 225 ಮತ್ತು ಬೆಳಗಾವಿ ಜಿಲ್ಲೆಯಲ್ಲಿ 602 ಎಕರೆ ಭೂಮಿ ಬೇಕಾಗಿದೆ. ಮಂದಗತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಎರಡು ವರ್ಷಗಳ ನಂತರ ಕೊನೆಗೂ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ಸಿಕ್ಕಿರುವುದು ಸಮಾಧಾನಕರ ಸಂಗತಿ.

ಈ ಯೋಜನೆ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಕನಸಿನ ಕೂಸಾಗಿತ್ತು. ಅವರು ಮೃತಪಟ್ಟ ನಂತರ ಯೋಜನೆಯ ವೇಗ ತಗ್ಗಿದೆ ಎಂಬುದು ಸಾರ್ವಜನಿಕರ ಆರೋಪ. ಆದಷ್ಟು ಬೇಗ ರೈಲು ಸಂಚರಿಸುವಂತಾಗಲಿ ಎಂಬುದು ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಜನರ ಆಶಯ.

Edited By : Shivu K
Kshetra Samachara

Kshetra Samachara

15/02/2022 08:20 am

Cinque Terre

25.06 K

Cinque Terre

0

ಸಂಬಂಧಿತ ಸುದ್ದಿ