ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನೀರು ಪೋಲಾಗುತ್ತಿದ್ದರೂ ಕಣ್ಣು ಬಿಟ್ಟು ನೋಡದ ಜಲಮಂಡಳಿ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದರೂ ಇಲ್ಲಿರುವ ಕೆಲವೊಂದು ಅವ್ಯವಸ್ಥೆಯಿಂದ ತನ್ನ ಹೆಗ್ಗಳಿಕೆಯನ್ನೇ ಕಡಿಮೆ ಮಾಡಿಕೊಳ್ಳುತ್ತಿದೆ.

ಹೌದು. ಕಳೆದ ಸುಮಾರು ದಿನಗಳಿಂದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ನೀರು ಪೋಲ್ ಆಗುತ್ತಿದ್ದರೂ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಜಲಮಂಡಳಿ ಮಾತ್ರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅಲ್ಲದೇ ಈ ಬಗ್ಗೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಹಾರಿಕೆ ಉತ್ತರವನ್ನು ನೀಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಜಲಮಂಡಳಿಯ ಅಧಿಕಾರಿಗಳಂತೂ ಕಂಡರೂ ಕಾಣದಂತೆ ವರ್ತಿಸುತ್ತಿರುವುದು ಬೇಸರ ಮೂಡಿಸಿದೆ. ಸುಮಾರು ದಿನಗಳಿಂದ ನೀರು ಪೋಲಾಗಿ ರಸ್ತೆಗೆ ಬಂದು ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯನ್ನು ಉಂಟು ಮಾಡುತ್ತಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆಗೆ ಫುಲ್ ಸ್ಟಾಫ್ ಹಾಕಬೇಕಿದೆ.

Edited By : Shivu K
Kshetra Samachara

Kshetra Samachara

15/02/2022 09:07 am

Cinque Terre

23.91 K

Cinque Terre

1

ಸಂಬಂಧಿತ ಸುದ್ದಿ