ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಬು.ತರ್ಲಘಟ್ಟದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಆರಂಭ

ಕುಂದಗೋಳ: ತಾಲೂಕಿನ ಬು.ತರ್ಲಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಕೆರೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಂಘದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಭು ನಂದೆಪ್ಪನವರ ನೇತೃತ್ವದಲ್ಲಿ ಭೂಮಿ ಪೂಜೆ ಮಾಡುವ ಕೆರೆ ಹೂಳೆತ್ತುವ ಕಾಮಗಾರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬು.ತರ್ಲಘಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಯೋಜನಾ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

16/02/2022 12:57 pm

Cinque Terre

17.1 K

Cinque Terre

1

ಸಂಬಂಧಿತ ಸುದ್ದಿ