ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ಮಹಾನಗರ ಪಾಲಿಕೆ ವಿಚಾರ

ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂಬ ಕೂಗು ಬಹಳ ದಿನಗಳ ಹಿಂದೆಯೇ ಕೇಳಿ ಬಂದಿತ್ತು. ಇದೀಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧ ಹೋರಾಟ ಕೂಡ ಆರಂಭಗೊಂಡಿದೆ.

ಧಾರವಾಡ ನಗರದ ಹಿರಿಯ ನಾಗರಿಕರು ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.

ಧಾರವಾಡ ಮಹಾನಗರ ಇದೀಗ ದೊಡ್ಡಮಟ್ಟದಲ್ಲಿ ಬೆಳೆದಿದೆ. ಸರ್ಕಾರದಿಂದ ಬರುವ ಅನುದಾನದ ಬಹುಪಾಲು ಹುಬ್ಬಳ್ಳಿಗೇ ಮೀಸಲಿಡಲಾಗುತ್ತಿದೆ. ಹೀಗಾಗಿ ಧಾರವಾಡ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಧಾರವಾಡದ ಅಸ್ಮಿತೆ ಉಳಿಯಬೇಕು ಎಂದರೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಅತೀ ಅವಶ್ಯವಾಗಿದೆ. ಹೀಗಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕು ಎಂಬ ಬೇಡಿಕೆ ಬಹಳ ದಿನಗಳಿಂದ ಇದ್ದು, ಈ ಬಾರಿ ಬೇರೆ ಬೇರೆ ರೀತಿಯಲ್ಲಿ ಈ ಬೇಡಿಕೆ ಈಡೇರಿಸಿಕೊಳ್ಳಲು ಧಾರವಾಡದ ನಾಗಕರಿಕರು ಸಜ್ಜಾಗಿದ್ದಾರೆ. ಅಭಿವೃದ್ಧಿ ದೃಷ್ಠಿಯಿಂದ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ನೀಡಲೇಬೇಕು ಎಂದು ಒತ್ತಾಯಿಸಲಾಗಿದೆ.

Edited By : Manjunath H D
Kshetra Samachara

Kshetra Samachara

23/02/2022 02:25 pm

Cinque Terre

78.47 K

Cinque Terre

7

ಸಂಬಂಧಿತ ಸುದ್ದಿ