ಹುಬ್ಬಳ್ಳಿ: ಅವಳಿ ನಗರದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರು ಸುಮಾರು ದಿನಗಳ ಹೋರಾಟ ನಡೆಸುತ್ತಿದ್ದರೂ ಕೂಡ ಯಾವುದೇ ರೀತಿ ಸ್ಪಂದಿಸದೇ ಇರುವ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ವತಿಯಿಂದ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದ ಅವರು, ಮಹಾನಗರ ಪಾಲಿಕೆ ಎಂಟು ತಿಂಗಳಿಂದ ಪೌರಕಾರ್ಮಿಕರಿಗೆ ಬೆಳಗಿನ ಉಪಾಹಾರ ಪೂರೈಕೆ ಸ್ಥಗಿತಗೊಳಿಸಿದೆ. ಆದರೆ, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಈ ಸಂಬಂಧ
ಹಲವಾರು ಬಾರಿ ಮನವಿ ಮಾಡಿದರು ಸ್ಪಂದನೆ ಸಿಕ್ಕಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಪೌರ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಉತ್ತಮ ಗುಣಮಟ್ಟದ ಬೆಳಗಿನ ಉಪಹಾರವನ್ನು ಪೌರ ಕಾರ್ಮಿಕರಿಗೆ ಪೂರೈಸುವಂತೆ ಹಾಗೂ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರ ಸಂಘದ ಕಚೇರಿ ಕಟ್ಟಡ ಒದಗಿಸಬೇಕೆಂದು ಆಗ್ರಹಿಸಿದರು. 60 ವರ್ಷ ಮೇಲ್ಪಟ್ಟ ಪೌರ ಕಾರ್ಮಿಕರಿಗೆ 10 ಲಕ್ಷ ಪರಿಹಾರ ಮತ್ತು ತಿಂಗಳಿಗೆ 15000 ಪಿಂಚಣಿ ನೀಡಬೇಕೆಂದು ಆಗ್ರಹಿಸಿದರು.
Kshetra Samachara
09/03/2022 04:43 pm