ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 90 ಲಕ್ಷ ಅನುದಾನ ಬಿಡುಗಡೆ

ಧಾರವಾಡ: ಧಾರವಾಡ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ರಾಜ್ಯ ಸರ್ಕಾರದಿಂದ 90 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ.

ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ವಿನಂತಿಸಿದ್ದರಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪ್ರಯತ್ನದಿಂದ ಇದೀಗ ಅನುದಾನ ಬಿಡುಗಡೆಯಾಗಿದೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ನೀಡಿದ ನಿರ್ದೇಶನ ಮೇರೆಗೆ ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ, ಕುಂದಗೋಳ, ನವಲಗುಂದ, ಕಲಘಟಗಿ, ಧಾರವಾಡ ವಿಧಾನಸಭಾ ಕ್ಷೇತ್ರಗಳ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆಂದು 90 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ.

ಪ್ರತಿ ಬಾರಿ ಕೇವಲ 50 ಸಾವಿರದಿಂದ 1 ಲಕ್ಷದವರೆಗೆ ಮಾತ್ರ ಸೀಮಿತವಿದ್ದ ಅನುದಾನ ಪ್ರಮಾಣ ಈ ಬಾರಿ 5 ಲಕ್ಷದಿಂದ 10 ಲಕ್ಷದವರೆಗೆ ಹೆಚ್ಚಳವಾಗಿದೆ.

Edited By : Nirmala Aralikatti
Kshetra Samachara

Kshetra Samachara

24/03/2022 10:10 pm

Cinque Terre

8.87 K

Cinque Terre

0

ಸಂಬಂಧಿತ ಸುದ್ದಿ