ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ, ವಿವಿಧ ಕಾರ್ಮಿಕ ಸಂಘಟನೆಗಳಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ರಸ್ತೆ ತಡೆದು ಪ್ರತಿಭಟನೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರ ವಿವಿಧ ಬೇಡಿಕೆಗಳಾದ ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ 7500 ನೇರ ನಗದು ವರ್ಗಾವಣೆ ಮಾಡಬೇಕು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕು. ಶಾಸನಬದ್ಧ ಬೆಂಬಲ ಕಾಯ್ದೆ ರೂಪಿಸಬೇಕು ಹಾಗೂ ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನ ವಿರೋಧಿ, ಎಪಿಎಂಸಿ ಭೂ ಸುಧಾರಣೆ ಮುಂತಾದ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು, ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
Kshetra Samachara
28/03/2022 02:31 pm