ಧಾರವಾಡ: ಧಾರವಾಡ ತಪೋವನ ಬಳಿಯ ಜೆಎಸ್ಎಸ್ ಆವರಣದಲ್ಲಿ ವಾಕ್ ಮತ್ತು ಶ್ರವಣ ವಿದ್ಯಾಲಯ ಮತ್ತು ವಿದ್ಯಾರ್ಥಿ ನಿಲಯದ ನೂತನ ಕಟ್ಟಡಗಳ ಭೂಮಿ ಪೂಜಾ ಕಾರ್ಯಕ್ರಮ ಜರುಗಿತು.
ಕೆಲಗೇರಿ ಕೆರೆಯ ದಂಡೆಯಲ್ಲಿರುವ ಜೆಎಸ್ಎಸ್ ಸಂಸ್ಥೆಯ ಆವರಣದಲ್ಲಿ ಜರುಗಿದ ವರ್ಣರಂಜಿತ ಸಮಾರಂಭದಲ್ಲಿ ನಾಡಿನ ಹರ-ಗುರು ಚರ ಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ ಗಣ್ಯರು ಭೂಮಿ ಪೂಜೆ ನೆರವೇರಿಸಿದರು.
ಸುತ್ತೂರನ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಸಾನಿಧ್ಯದಲ್ಲಿ ಮತ್ತು ಗದಗ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಸ್ವಾಮೀಜಿ, ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಸದಾಶಿವ ಸ್ವಾಮೀಜಿ, ಮುಧೋಳದ ಹರ್ಷಾನಂದ ಸ್ವಾಮೀಜಿ, ಮುರಗೋಡದ ಮಹಾಂತ ಸ್ವಾಮೀಜಿ, ಆಲಮಟ್ಟಿಯ ರುದ್ರಮುನಿ ಸ್ವಾಮೀಜಿ, ಉಪ್ಪಿನ ಬೆಟಗೇರಿಯ ಕುಮಾರ ವಿರುಪಾಕ್ಷ ಸ್ವಾಮೀಜಿ, ಕುಂದರಗಿಯ ಅಮರೇಶ್ವರ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮನಗುಂಡಿಯ ಬಸವಾನಂದ ಸ್ವಾಮೀಜಿ, ಹೊಸಮಠದ ಚಂದ್ರಶೇಖರ ಸ್ವಾಮೀಜಿ, ನೀಲಕಂಠ ಸ್ವಾಮೀಜಿ ಸಮ್ಮುದಲ್ಲಿ ಗಣ್ಯರು ಭೂಮಿಪೂಜೆ ನೆರವೇರಿಸಿದರು.
Kshetra Samachara
05/04/2022 09:26 pm