ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ:ಬೇಡಿಕೆ ಈಡೇರಿಕೆಗೆ ಏ.12 ರಂದು ಕಟ್ಟಡ ಕಾರ್ಮಿಕರ ಹೋರಾಟ

ಹುಬ್ಬಳ್ಳಿ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಏಪ್ರಿಲ್ 12 ರಂದು ಕಾರ್ಮಿಕ ಭವನ ಚಲೋ ಪ್ರತಿಭಟನಾ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಅನೇಕ ಸೌಲಭ್ಯಗಳನ್ನು ರೂಪಿಸಿದ್ದು,ಯಾವುದೇ ಸೌಲಭ್ಯಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವರಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ಕಾರ್ಮಿಕರಿಗೆ ಪಿಂಚಣಿ ಯೋಜನೆಯಲ್ಲಿನ ದ್ವಂದ್ವ ನೀತಿಯನ್ನು ಕೈ ಬಿಟ್ಟು ಅನಿಯಮಿತ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕು. ಶೈಕ್ಷಣಿಕ ಧನ ಸಹಾಯದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಅನೇಕ ತಾಂತ್ರಿಕ ದೋಷ ಉಂಟಾಗುತ್ತಿದ್ದು, ಅರ್ಜಿ ಸಲ್ಲಿಸಲು ಮತ್ತು ಆವಧಿ ದಿನಾಂಕವನ್ನು ಜೂನ್ 30 ರ ವರೆಗೆ ವಿಸ್ತರಿಸಬೇಕು ಎಂದರು.

Edited By :
Kshetra Samachara

Kshetra Samachara

07/04/2022 02:42 pm

Cinque Terre

25.74 K

Cinque Terre

0

ಸಂಬಂಧಿತ ಸುದ್ದಿ