ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಆಶಾ ಕಾರ್ಯಕರ್ತೆಯರಿಂದ ಕಾಯಕಯೋಗಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪೂರ ಬೆಂಗಳೂರು ಇವರ ವತಿಯಿಂದ ಮೇ 1 ರಂದು ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾಯಕಯೋಗಿ ಎಂಬ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ಜಿಲ್ಲೆಗೆ ಒಬ್ಬರಂತೆ ವಿಶೇಷ ಸಾಧನೆ ಮಾಡಿದ ಆಶಾ ಕಾರ್ಯಕರ್ತೆಯರನ್ನು ಗುರಿತಿಸಲಾಗುವುದು ಧಾರವಾಡ ಶೈಕ್ಷಣಿಕ ಜಿಲ್ಲೆಯಿಂದ ಒಬ್ಬ ಆಶಾ ಕಾರ್ಯಕರ್ತೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಪ್ರಶಸ್ತಿ ನಗದು ಹಣ ಹಾಗೂ ಪ್ರಮಾಣ ಪತ್ರ ಒಳಗೊಂಡಿರುತ್ತದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ. ಮಂಜುನಾಥ ಬಾರಕೇರ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಏ.20 ರಂದು ಕೊನೆಯ ದಿನವಾಗಿದೆ ಆಸಕ್ತ ಆಶಾ ಕಾರ್ಯಕರ್ತೆಯರು ವಿಶೇಷ ಸಾಧನೆ ಮಾಡಿದ ಆಶಾ ಕಾರ್ಯಕರ್ತೆಯರು ಅಗತ್ಯ ದಾಖಲಾತಿ ಸಮೇತ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾಧ್ಯಕ್ಷಡಾ.ಮಂಜುನಾಥ ಬಾರಕೇರ ಅವರನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಮಾಡಿ ಮೊಬೈಲ್ ಸಂಖ್ಯೆ 7204455103 ಸಂಪರ್ಕಿಸಲು ಕೋರಲಾಗಿದೆ.

Edited By : PublicNext Desk
Kshetra Samachara

Kshetra Samachara

18/04/2022 08:25 pm

Cinque Terre

2.06 K

Cinque Terre

0

ಸಂಬಂಧಿತ ಸುದ್ದಿ