ಧಾರವಾಡ: ಧಾರವಾಡ ಜಿಲ್ಲಾ ಸರ್ಕಾರಿ ಆಸ್ಪತ್ರೆ ಜಿಲ್ಲೆಯ ಅನೇಕ ಬಡ ಜನರಿಗೆ ಜೀವನಾಡಿಯಾಗಿದ್ದು, ಈ ಆಸ್ಪತ್ರೆಗೆ ಪ್ರತಿ ದಿನ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಕೇವಲ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಲಭ್ಯವಿದ್ದು, ತುರ್ತು ಚಿಕಿತ್ಸೆ ಸೇರಿ ಇತರ ಸೌಲಭ್ಯಗಳೇ ಇಲ್ಲದಂತಾಗಿದೆ ಎಂದು ಜಯ ಕರ್ನಾಟಕ ಸಂಘಟನೆಕಾರರು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಐಸಿಯು ಸೇರಿದಂತೆ ರೀತಿಯ ಸ್ಕ್ಯಾನಿಂಗ್ ಸೌಲಭ್ಯದ ಕೊರತೆ ಕಂಡುಬರುತ್ತದೆ. ಅಲ್ಲದೆ ಇಲ್ಲಿರುವ ವೈದ್ಯಾಧಿಕಾರಿಗಳು ಬಡ ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೆ ನಮ್ಮಲ್ಲಿ ಸೂಕ್ತ ರೀತಿಯ ಸೌಲಭ್ಯವಿಲ್ಲ ಎಂದು ಹೇಳಿ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ಹೋಗಲು ಶಿಫಾರಸು ಮಾಡುತ್ತಿರುವುದು ಖಂಡನೀಯವಾಗಿದೆ ಎಂದರು.
ಜಿಲ್ಲೆಯ ಬಡ ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪುತ್ತಿರುವುದು ಹೆಚ್ಚು ಕಂಡು ಬಂದಿದೆ. ಆದ್ದರಿಂದ ಬಡ ಜನರಿಗೆ ಸೂಕ್ತ ರೀತಿಯ ತುರ್ತು ಚಿಕಿತ್ಸೆ ಸೌಲಭ್ಯವನ್ನು ಒದಗಿಸಿಕೊಡುವ ಮೂಲಕ ಬಡ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ, ಜಯ ಕರ್ನಾಟಕ ವೇದಿಕೆ ಕಾರ್ಯಕರ್ತರು ಅಧಿಕಾರಿಗಳಿಗೆ ಒತ್ತಾಯಿಸಿದರು.
Kshetra Samachara
19/04/2022 11:02 pm