ಧಾರವಾಡ: ಧಾರವಾಡ ತಾಲೂಕಿನ ಯಾದವಾಡ ಗ್ರಾಮದಿಂದ ನರೇಂದ್ರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ಥಿಗೊಳಿಸಬೇಕು ಎಂಬ ಜನರ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಬಹುದಿನಗಳ ಬೇಡಿಕೆ ಇದೀಗ ಈಡೇರಿದಂತಾಗಿದೆ.
ಯಾದವಾಡ ಗ್ರಾಮದ ಮೂಲಕ ಹಾದು ನರೇಂದ್ರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ನರೇಂದ್ರದಿಂದ ಮುಂದೆ ಧಾರವಾಡ ಹಾಗೂ ರಾಷ್ಟ್ರೀಯ ಹೆದ್ದಾರಿಗೂ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ನಿರ್ಮಾಣ ಕಾರ್ಯ ಇದೀಗ ಆರಂಭಗೊಂಡಿದ್ದು, ಜನರಲ್ಲಿ ಹರ್ಷವನ್ನುಂಟು ಮಾಡಿದೆ.
ಸದ್ಯ ಸುಸಜ್ಜಿತ ರಸ್ತೆ ನಿರ್ಮಾಣವಾಗುತ್ತಿದ್ದು, ಕಚ್ಚಾ ರಸ್ತೆಯನ್ನು ಇದೀಗ ಪಕ್ಕಾ ಡಾಂಬರು ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದೆ.
Kshetra Samachara
25/04/2022 06:01 pm