ಕುಂದಗೋಳ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ದೊಡ್ಡಬಳ್ಳಾಪುರ ಬೆಂಗಳೂರು ಕೊಡಮಾಡುತ್ತಿರುವ ಕಾಯಕಯೋಗಿ ಪ್ರಶಸ್ತಿಯನ್ನು ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಅದರಗುಂಚಿಯ ಆಶಾ ಕಾರ್ಯಕರ್ತೆ ಲಕ್ಷ್ಮೀ ಕಲ್ಲಪ್ಪ ಕೆಂಗಾಪೂರ ಇವರಿಗೆ ನೀಡಲಾಗುತ್ತಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ ಬಾರಕೇರ ಪಬ್ಲಿಕ್ ನೆಕ್ಸ್ಟ್'ಗೆ ತಿಳಿಸಿದ್ದಾರೆ.
ಹೌದು ! ಮೇ 1 ರಂದು ಬೆಂಗಳೂರಿನ ವಿಜಯನಗರದಲ್ಲಿನ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಡೆಯುವ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿ ನೀಡಿ ಅಭಿನಂದಿಸಲಾಗುತ್ತದೆ. ಈ ಕಾರ್ಯಕ್ರಮವು ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ನಾಡಿನ ಪ್ರಗತಿಪರ ಚಿಂತಕರು, ಶರಣರು, ವಿಜ್ಞಾನಿಗಳು, ವೈದ್ಯರು, ಭಾಷಣಕಾರರು, ಚಲನಚಿತ್ರ ನಟರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
Kshetra Samachara
25/04/2022 08:39 pm