ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯಲ್ಲಿ ಸುರಿದ ಬಾರಿ ಮಳೆಯಿಂದ ಬಹುತೇಕ ಕಡೆಯಲ್ಲಿ ಅವಘಡಗಳು ಸಂಭವಿಸಿದ್ದು, ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಅಂಡರ್ ಪಾಸ್ ನಲ್ಲಿ ಕೂಡ ನೀರು ನಿಂತು ಪ್ರಯಾಣಿಕರು ಪರದಾಡುವಂತಾಗಿತ್ತು.
ಹೌದು,ನಿನ್ನೆ ಸುರಿದ ಬಾರಿ ಮಳೆಯಿಂದ ಹುಬ್ಬಳ್ಳಿಯ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ರೈಲ್ವೆ ನಿಲ್ದಾಣದ ಅಂಡರ್ ಪಾಸ್ ನಲ್ಲಿ ಕೂಡ ನೀರು ಹೊಕ್ಕಿರುವುದು ನಿಜಕ್ಕೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಒಟ್ಟಿನಲ್ಲಿ ಅಕಾಲಿಕ ಮಳೆಯು ಅವಾಂತರ ಸೃಷ್ಟಿಸುತ್ತಿದ್ದು, ನಿನ್ನೆಯ ಮಳೆಯಿಂದ ಜನರಿಗೆ ಸಾಕಷ್ಟು ನಷ್ಟ ಉಂಟುಮಾಡಿದೆ.
Kshetra Samachara
27/04/2022 09:11 am