ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ತಡಸಿನಕೊಪ್ಪದಲ್ಲಿ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ ಜನ

ಧಾರವಾಡ: ಬೇಸಿಗೆ ಸಂದರ್ಭದಲ್ಲಿ ಎಲ್ಲೆಡೆ ಕುಡಿಯುವ ನೀರಿನದ್ದೇ ಸಮಸ್ಯೆ. ಕನಿಷ್ಠ ಪಕ್ಷ ನಾಲ್ಕು ದಿನಕ್ಕಾದರೂ ಕುಡಿಯುವ ನೀರು ಪೂರೈಕೆಯಾಗಬೇಕು. ಆದರೆ, ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದೇ ಅಲ್ಲಿನ ಜನ ನೀರಿಗಾಗಿ ಪರಿತಪಿಸುವಂತಾಗಿದೆ.

ಹೀಗೆ ನೀರಿಗಾಗಿ ಕೊಡಗಳನ್ನು ಪಾಳೆ ಹಚ್ಚಿದ್ದು ಯಾವುದೋ ನಲ್ಲಿ ಮುಂದೆ ಅಲ್ಲ. ಬದಲಿಗೆ ಕುಡಿಯುವ ನೀರು ಪೂರೈಕೆಯಾಗುವ ಮುಖ್ಯ ಪೈಪ್‌ಲೈನ್ ಮುಂದೆ.

ಮುಖ್ಯ ಪೈಪ್‌ಲೈನ್‌ಲ್ಲಿ ವಾಲ್ ಸೆಟ್ ಮಾಡಲಾಗಿದ್ದು, ಅಲ್ಲಿಗೆ ಬಂದು ಜನ ನೀರು ತುಂಬಿಕೊಂಡು ಹೋಗುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ನೀರು ಪೂರೈಕೆಯಾಗದ ಕಾರಣ ತಡಸಿನಕೊಪ್ಪ ಗ್ರಾಮದ ಜನ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಒಟ್ಟಾರೆಯಾಗಿ ತಡಸಿನಕೊಪ್ಪ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಈ ಸಮಸ್ಯೆ ಬಗೆಹರಿಸಬೇಕಾಗಿದೆ.

Edited By : Manjunath H D
Kshetra Samachara

Kshetra Samachara

14/05/2022 10:55 pm

Cinque Terre

61.1 K

Cinque Terre

0

ಸಂಬಂಧಿತ ಸುದ್ದಿ