ಅಳ್ನಾವರ:ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೆ ಒಂದೇ ಮಳೆ ಸುರಿಯುತ್ತಿದೆ.ಮಳೆಯ ಪ್ರಮಾಣ ಹೆಚ್ಚಿದ ಪರಿಣಾಮ ಪಟ್ಟಣದ ಬಸ್ ನಿಲ್ದಾಣ ದ ಎದುರು ವಿಷ್ಣು ಲಾಡ್ಜ್ ಹತ್ತಿರದ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಜಿಟಿ ಜಿಟಿ ಮಳೆಗೆ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು,ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. ಸ್ವಲ್ಪ ಸಮಯದ ನಂತರ ಬೆಂಕಿ ತಣ್ಣಗಾಗಿದೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Kshetra Samachara
19/05/2022 08:53 pm