ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ತಮ್ಮನ್ನು ಖಾಯಂ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಮತ್ತೆ ಹೋರಾಟದ ಹಾದಿ ತುಳಿದಿದ್ದಾರೆ.
ಜುಲೈ 1 ರಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪೌರ ಕಾರ್ಮಿಕರು ತಮ್ಮ ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸಲು ಸಜ್ಜಾಗಿದ್ದಾರೆ.
ತಮ್ಮನ್ನು ಖಾಯಂ ನೌಕರರನ್ನಾಗಿ ನೇಮಕ ಮಾಡಿಕೊಂಡು ತಮಗೆ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು ಎಂಬುದು ಪೌರ ಕಾರ್ಮಿಕರ ಹಲವಾರು ದಿನಗಳ ಬೇಡಿಕೆಯಾಗಿದ್ದು, ಈಗ ಇದೇ ಬೇಡಿಕೆಗಳನ್ನಿಟ್ಟುಕೊಂಡು ಪೌರ ಕಾರ್ಮಿಕರು ಮತ್ತೆ ಹೋರಾಟ ಆರಂಭಿಸಲಿದ್ದಾರೆ.
Kshetra Samachara
29/06/2022 03:47 pm