ಹುಬ್ಬಳ್ಳಿ: ಈಗಾಗಲೇ ಸ್ಮಾರ್ಟ್ ಸಿಟಿ ಹಾಗೂ ಬಿ.ಆರ್.ಟಿ.ಎಸ್ ಕಾಮಗಾರಿ ಹೆಸರಲ್ಲಿ ತೆರವುಗೊಳಿಸಿದ್ದ ತಾತ್ಕಾಲಿಕ ಬಸ್ ನಿಲ್ದಾಣಗಳಿಗೆ ಹೊಸ ಟಚ್ ನೀಡಲು ಮಹಾನಗರ ಪಾಲಿಕೆ ಮುಂದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಸ್ ನಿಲ್ದಾಣಗಳು ಶೀಘ್ರವಾಗಿ ಬರಲಿವೆ.
ಇನ್ನೂ ಬಸ್ ನಿಲ್ದಾಣದಲ್ಲಿ ಉಚಿತ ವೈಫೈ, ಸಿಸಿ ಟಿವಿ, ಹಾಗೂ ಹವಾನಿಯಂತ್ರಣ ವ್ಯವಸ್ಥೆ ಹೊಂದಿರುವ ನೂತನ ಹೊಸ 500 ಬಸ್ ನಿಲ್ದಾಣಗಳು ಹುಬ್ಬಳ್ಳಿ-ಧಾರವಾಡದಲ್ಲಿ ತಲೆ ಎತ್ತಲಿದ್ದು, BRTS ರಸ್ತೆ ನಿರ್ಮಾಣ ಸಂದರ್ಭದಲ್ಲಿ ಬಸ್ ನಿಲ್ದಾಣಗಳನ್ನು ತೆರವುಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿವೆ. ಈ ನಿಟ್ಟಿನಲ್ಲಿ ವಿನೂತನ ನಿರ್ಧಾರಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ.
ಹೊಸ ಬಸ್ ನಿಲ್ದಾಣಗಳ ಸ್ಥಾಪನೆಗಾಗಿ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಹಾಗೂ ಖಾಸಗಿ ಕಂಪನಿಯೊಂದರ ಸಹಯೋಗದಲ್ಲಿ ಪ್ರಾಯೋಗಿಕ ಬಸ್ ನಿಲ್ದಾಣ ನಿರ್ಮಿಸಲು ಈಗಾಗಲೇ ಸ್ಥಳ ಪರಿಶೀಲನೆ ಕಾರ್ಯ ಪ್ರಾರಂಭಗೊಂಡಿದೆ. ಮಹಾಪೌರ ಈರೇಶ್ ಅಂಚಟಗೇರಿ ಅವರ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಬಸ್ ನಿಲ್ದಾಣಗಳಿಗೆ ಸ್ಥಳ ಪರಿಶೀಲಿಸುವ ಕಾರ್ಯ ಪ್ರಾರಂಭಗೊಳಿಸಲಾಗಿದೆ.
Kshetra Samachara
04/07/2022 08:49 pm