ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸೋರುತಿಹುದು ಶಾಲೆಯ ಮಾಳಿಗಿ: ದೇವಸ್ಥಾನದಲ್ಲೇ ಮಕ್ಕಳಿಗೆ ಪಾಠ

ಧಾರವಾಡ: ಕಳೆದ ಎರಡ್ಮೂರು ದಿನಗಳಿಂದ ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ತಾಲೂಕಿನ ಮುಗದ ಗ್ರಾಮದ ಹೆಣ್ಣು ಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಬಿರುಕು ಬಿಟ್ಟು ಶಾಲೆಯ ಮೇಲ್ಮಾಳಿಗೆ ಸೋರುತ್ತಿದೆ.

ಕಳೆದ ಎರಡು ದಿನಗಳಿಂದ ಶಾಲಾ ಮಕ್ಕಳಿಗೆ ಗ್ರಾಮದ ಕಲ್ಮೇಶ್ವರ ದೇವಸ್ಥಾನವೇ ಆಸರೆಯಾಗಿದ್ದು, ದೇವಸ್ಥಾನದಲ್ಲೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಶಾಲೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಇನ್ನೂ ಎರಡ್ಮೂರು ದಿನ ಮಳೆ ಹೀಗೇ ಮುಂದುವರೆದಿದ್ದೇ ಆದಲ್ಲಿ ಗೋಡೆಗಳು ಕುಸಿದು ಬೀಳುವ ಸಾಧ್ಯತೆ ಇದೆ. ಹೀಗಾಗಿ ಶಾಲಾ ಶಿಕ್ಷಕರು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮಕ್ಕಳಿಗೆ ದೇವಸ್ಥಾನದಲ್ಲಿ ಪಾಠ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಣ ಇಲಾಖೆ ಕೂಡ ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕಾಗಿದೆ.

Edited By : Shivu K
Kshetra Samachara

Kshetra Samachara

06/07/2022 06:33 pm

Cinque Terre

78.03 K

Cinque Terre

0

ಸಂಬಂಧಿತ ಸುದ್ದಿ