ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಾರ್ಡ್ ನಂಬರ್ 39 ರ ವ್ಯಾಪ್ತಿಯಲ್ಲಿ ಬರುವ ಬಾಪೂಜಿನಗರ ಸೇರಿದಂತೆ ಸುತ್ತಮುತ್ತಲಿನ ಬಡಜನರಿಗೆ ಈಗಾಗಲೇ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ರವರು ಸೂಚಿಸಿದ ಹಾಗೆ ಹಕ್ಕುಪತ್ರ ನೋಂದಣಿ ಕಾರ್ಯಕ್ರಮವು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಪ್ರಾರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಶೆಟ್ಟರ್ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.
ಹೌದು.. ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹಕ್ಕು ಪತ್ರ ವಿತರಣೆ ಕಾರ್ಯಕ್ಕೆ ಚಾಲನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಶಾಸಕರಿಗೆ ಅಭಿನಂದನೆ ಸಲ್ಲಿಸಿದ್ದು, ಸಂತಸಗೊಂಡ ಇಲ್ಲಿಯ ಜನರು ಮೆರವಣಿಗೆ ಮೂಲಕ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಆಗಮಿಸಿ ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
ಒಟ್ಟಿನಲ್ಲಿ ಶಾಸಕರು ನೀಡಿರುವ ಭರವಸೆಯಂತೆ ವಾರ್ಡ್ ನಂಬರ 39ರಲ್ಲಿರುವ ಅರ್ಹ ಫಲಾನುಭವಿಗಳ ಸಮಸ್ಯೆಗೆ ಸ್ಪಂದಿಸಿರುವುದು ವಿಶೇಷವಾಗಿದೆ.
Kshetra Samachara
12/07/2022 03:30 pm