ಪಬ್ಲಿಕ್ ನೆಕ್ಸ್ಟ್ ವರದಿ- ಈರಣ್ಣ ವಾಲಿಕಾರ
ಹುಬ್ಬಳ್ಳಿ: ವಾಣಿಜ್ಯ ನಗರಿಯ ಕೆಲ ಬಡಾವಣೆಗಳಲ್ಲಿ ಬೀದಿ ನಾಯಿಗಳದ್ದೇ ಕಾರುಬಾರು. ನಗರದ ಬಹುತೇಕ ರಸ್ತೆಗಳನ್ನು ಆಕ್ರಮಿಸಿಕೊಂಡಿರುವ ಬೀದಿ ನಾಯಿಗಳಿಗೆ ರಸ್ತೆಗಳೇ ಆಶ್ರಯ ತಾಣಗಳಾಗಿವೆ. ಇದರಿಂದ ನಗರದಲ್ಲಿನ ಜನರು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಹೌದು. ರಸ್ತೆ ಮಧ್ಯೆದಲ್ಲಿಯೇ ದಿನನಿತ್ಯ ಅಡ್ಡಾಡುವ ನಾಯಿಗಳ ಹಾವಳಿಯಿಂದ ವಾಹನ ಸವಾರರು ನೆಮ್ಮದಿಯಿಂದ ವಾಹನ ಚಾಲನೆ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಪಾಲಿಕೆ ಮಾತ್ರ ಈ ವಿಷಯದಲ್ಲಿ ಜಾಣ ಕುರುಡು ಪ್ರದರ್ಶಿಸುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಪಾಲಿಕೆ ಅಧಿಕಾರಿಗಳಿಗೆ ಕೂಡಲೆ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕಾಗಿದೆ.
ನಗರದ ಪ್ರತಿಯೊಂದು ರಸ್ತೆಯಲ್ಲಿಯೂ ಬೀದಿ ನಾಯಿಗಳು ಗುಂಪು ಗುಂಪಾಗಿ ರಸ್ತೆ ಮೇಲೆ ಓಡಾಡುತ್ತವೆ. ಹತ್ತಾರು ಮಕ್ಕಳಿಗೆ ಗಾಯಗೊಳಿಸಿವೆ. ಇಂಥ ಬೀದಿ ನಾಯಿಗಳ ಹತೋಟಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ನಗರದ ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
Kshetra Samachara
14/07/2022 04:14 pm