ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಸಾರಿಗೆ ಸೌಲಭ್ಯಕ್ಕಾಗಿ ಬಸ್ ತಡೆ : ಸಮಸ್ಯೆ ಬಗೆಹರಿಸಿದ ಚಿಕ್ಕನಗೌಡರು

ಕುಂದಗೋಳ : ತಾಲೂಕಿನ ಹೊಸಳ್ಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕಳೆದ ಹಲವಾರು ದಿನಗಳಿಂದ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾರಿಗೆ ಸಂಪರ್ಕ ಇಲ್ಲದೆ ತೊಂದರೆ ಅನುಭವಿಸಿ ಇಂದು ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ದಿಡೀರ್ ರಸ್ತೆ ತಡೆ ನಡೆಸಿದ್ದರು.

ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಪೊಲೀಸರು ಹಾಗೂ ಸ್ಥಳೀಯ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಆಲಿಸಿ ಬಸ್ ಬಿಡುವ ಆಶ್ವಾಸನೆ ಕೊಟ್ಟ ಬಳಿಕವೂ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಧರಣಿ ಹಿಂಪಡೆದಿಲ್ಲ.

ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ಮಂಡಳಿ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ಆಗುತ್ತಿರುವ ತೊಂದರೆ ವಿವರಿಸಿ ಬಸ್ ಸೌಲಭ್ಯ ಕಲ್ಪಿಸಲು ವಿನಂತಿಸಿದಾಗ, ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ಬಸ್ ಸೌಲಭ್ಯ ಒದಗಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ರಸ್ತೆ ತಡೆ ನಡೆಸಿದ್ದ ವಿದ್ಯಾರ್ಥಿ ಹಾಗೂ ಗ್ರಾಮಸ್ಥರು ರಸ್ತೆ ತಡೆ ಕೈ ಬಿಟ್ಟು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Edited By :
Kshetra Samachara

Kshetra Samachara

14/07/2022 09:14 pm

Cinque Terre

45.24 K

Cinque Terre

0

ಸಂಬಂಧಿತ ಸುದ್ದಿ